
ಲಂಡನ್: ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಿರ್ಣಾಯಕ ಘಟದತ್ತ ಸಾಗಿದ್ದು, 3ನೇ ದಿನದಾಟದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ನಾಲ್ಕು ವಿಕೆಟ್ ಕಳೆದುಕೊಂಡಿರುವ ತಂಡಕ್ಕೆ ಆಸರೆಯಾಗಿದ್ದಾರೆ.
ಯುವ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಟೆಸ್ಟ್ ಪಂದ್ಯದಲ್ಲಿ ತಮ್ಮ ನಾಲ್ಕನೇ ಶತಕ ಬಾರಿಸುವ ಮೂಲಕ ಇಂಗ್ಲೆಂಡ್ ಮೇಲಿನ ತಮ್ಮ ಆಧಿಪತ್ಯವನ್ನು ಮುಂದುವರೆಸಿದ್ದಾರೆ. 24 ವರ್ಷದ ಜೈಸ್ವಾಲ್ ಇನ್ನಿಂಗ್ಸ್‌ನ 51ನೇ ಓವರ್‌ನಲ್ಲಿ ಶತಕ ಗಳಿಸಿದರು. ಇದು ಆಟದ ಅತ್ಯಂತ ದೀರ್ಘ ಸ್ವರೂಪದಲ್ಲಿ ಜೈಸ್ವಾಲ್ ಅವರ ಆರನೇ ಶತಕವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಜೈಸ್ವಾಲ್ ತಮ್ಮ ವಿಕೆಟ್ ಅನ್ನು ಅಗ್ಗವಾಗಿ ಕಳೆದುಕೊಂಡರು. ಆದಾಗ್ಯೂ, ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿ, ಓವಲ್‌ನಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಭಾರತದ ಸ್ಥಾನವನ್ನು ಗಟ್ಟಿಗೊಳಿಸಿದರು.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು 12 ಶತಕಗಳನ್ನು ಗಳಿಸಿದ್ದಾರೆ. ಇದು ಒಂದೇ ಟೆಸ್ಟ್ ಸರಣಿಯಲ್ಲಿ ಭಾರತ ದಾಖಲಿಸಿದ ಅತಿ ಹೆಚ್ಚು ಶತಕವಾಗಿದ್ದು, 1978 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಯಲ್ಲಿ 11 ಶತಕಗಳ ಹಿಂದಿನ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.
Advertisement