
ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್‌ನ ಬೀದಿಗಳಲ್ಲಿ ಅಡ್ಡಾಡುತ್ತಿರುವುದು ಕಂಡುಬಂತು. ಟಿ20ಐ ಮತ್ತು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಬಲಗೈ ಬ್ಯಾಟ್ಸ್‌ಮನ್ ಇದೀಗ ಈಗ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಐಪಿಎಲ್ 2025ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಾಣಿಸಿಕೊಳ್ಳುವ ಮೊದಲು, ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಂಡರು. ಸದ್ಯ ವಿರಾಮದಲ್ಲಿರುವ ಕೊಹ್ಲಿ, ಅಕ್ಟೋಬರ್‌ನಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಕೊಹ್ಲಿ ಮತ್ತು ಅನುಷ್ಕಾ ಇಬ್ಬರೂ 2024ರಲ್ಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ಲಂಡನ್‌ಗೆ ಸ್ಥಳಾಂತರಗೊಂಡಿದ್ದಾರೆ. ಇತ್ತೀಚೆಗೆ, ದಂಪತಿ ಲಂಡನ್‌ನ ಬೀದಿಗಳಲ್ಲಿ ನಡೆದು ಹೋಗುತ್ತಿರುವುದು ಮತ್ತು ಸ್ಥಳೀಯರೊಂದಿಗೆ ಮಾತುಕತೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.
ಈ ವಿಡಿಯೋ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದ್ದು, ಭಾರತೀಯ ಅಭಿಮಾನಿಗಳು ಭಾವುಕರಾಗಿದ್ದಾರೆ. ಅವರಲ್ಲಿ ಹಲವರು ಭಾರತದ ಮಾಜಿ ನಾಯಕ ಖ್ಯಾತಿಗಿಂತ ಶಾಂತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಸದ್ಯ, ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳುವ ಅನೇಕ ವರದಿಗಳು ಹರಿದಾಡುತ್ತಿವೆ.
ಈ ಸ್ಟಾರ್ ಜೋಡಿ ಈಗಾಗಲೇ ಟೆಸ್ಟ್ ಮತ್ತು ಟಿ20ಐಗಳಿಂದ ನಿವೃತ್ತಿ ಹೊಂದಿದ್ದು, ವರ್ಷದ ಬಹುಪಾಲು ಆಟದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಒಂದೇ ಮಾದರಿಯಲ್ಲಿ ಆಡುವ ಅವಕಾಶವಿರುವುದರಿಂದ ಕೊಹ್ಲಿ ಮತ್ತು ರೋಹಿತ್ ಅವರಿಗೆ ಕೆಲವೇ ಪಂದ್ಯಗಳು ಮಾತ್ರ ಇರುತ್ತವೆ.
ಆರಂಭಿಕ ವೇಳಾಪಟ್ಟಿಯ ಪ್ರಕಾರ, ಭಾರತ ಅಕ್ಟೋಬರ್‌ನಿಂದ ಮುಂದಿನ ಐಪಿಎಲ್ ವರೆಗೆ ಕೇವಲ ಒಂಬತ್ತು ಏಕದಿನ ಪಂದ್ಯಗಳನ್ನು ಆಡಲಿದೆ. ಏಕದಿನ ವಿಶ್ವಕಪ್‌ಗೆ ಇನ್ನೂ ಎರಡು ವರ್ಷ ಬಾಕಿ ಉಳಿದಿದ್ದು, ಅಲ್ಲಿಯವರೆಗೆ ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ಕಾಯ್ದುಕೊಳ್ಳುವುದು ಈ ಜೋಡಿಗೆ ಸವಾಲಾಗಲಿದೆ.
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಮ್ಮ ಅವಕಾಶಗಳನ್ನು ಹೆಚ್ಚಿಸಿಕೊಳ್ಳಲು ವಿಜಯ್ ಹಜಾರೆ ಟ್ರೋಫಿಯನ್ನು ಆಡುವ ಅಗತ್ಯವಿದೆ ಎಂದು ಕೆಲವು ವರದಿಗಳು ಹೇಳಿವೆ.
Advertisement