
ಯುಎಇಯಲ್ಲಿ ನಡೆಯಲಿರುವ ಏಷ್ಯಾ ಕಪ್ 2025 (Asia Cup 2025) ಟೂರ್ನಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು 15 ಸದಸ್ಯರ ಭಾರತ ತಂಡವನ್ನು ಘೋಷಿಸಿದ್ದು 'ಆಪತ್ಭಾಂದವ' ಕೆಎಲ್ ರಾಹುಲ್ (KL Rahul) ಅವರನ್ನು ತಂಡದಿಂದ ಕೈಬಿಡಲಾಗಿದೆ. ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ನಡೆದ ಸಭೆ ಬಳಿಕ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಪತ್ರಿಕಾಗೋಷ್ಠಿ ನಡೆಸಿದ್ದು ಭಾರತೀಯ ತಂಡದ 15 ಆಟಗಾರರ ಹೆಸರುಗಳನ್ನು ಘೋಷಿಸಿದರು.
ಶುಭಮನ್ ಗಿಲ್ ಅವರಿಗೆ ಉಪನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಇದರ ಹೊರತಾಗಿ, ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ರಿಂಕು ಸಿಂಗ್ ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇಂಗ್ಲೆಂಡ್ ಪ್ರವಾಸದಲ್ಲಿ 3 ಟೆಸ್ಟ್ ಪಂದ್ಯಗಳನ್ನು ಆಡಿದ ಜಸ್ಪ್ರೀತ್ ಬುಮ್ರಾ ಅವರು ಏಷ್ಯಾ ಕಪ್‌ಗೆ ಲಭ್ಯವಿದ್ದಾರೆ ಎಂದು ಬಿಸಿಸಿಐ ಈ ಹಿಂದೆ ಸ್ಪಷ್ಟಪಡಿಸಿದ್ದು 15 ಸದಸ್ಯರ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಏಷ್ಯಾ ಕಪ್‌ಗಾಗಿ ಭಾರತೀಯ ತಂಡವನ್ನು ಘೋಷಿಸಿದ ನಂತರ, ಅನೇಕ ಆಟಗಾರರು ಎದೆಗುಂದಿದ್ದಾರೆ. ಕೆಲವು ಶ್ರೇಷ್ಠ ಆಟಗಾರರಿಗೆ ಭಾರತೀಯ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇವರಲ್ಲಿ ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್, ವೇಗದ ಬೌಲರ್ ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್ ಮತ್ತು ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಸೇರಿದ್ದಾರೆ.
ಅಜಿತ್ ಅಗರ್ಕರ್, "ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದಿರುವುದು ದುರದೃಷ್ಟಕರ. ಅದು ಅವರ ತಪ್ಪಲ್ಲ, ಆದರೆ ನಮ್ಮ ತಪ್ಪೂ ಅಲ್ಲ. ಅವರು ತಮ್ಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ" ಎಂದು ಹೇಳಿದರು. ಯಶಸ್ವಿ ಜೈಸ್ವಾಲ್ ಅವರನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗಿದೆ. ಪಂತ್ ಗಾಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರು ಚೇತರಿಸಿಕೊಳ್ಳದಿರುವ ಸಾಧ್ಯತೆಯೂ ಇದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಂಚಲನ ಮೂಡಿಸಿದ ಮೊಹಮ್ಮದ್ ಸಿರಾಜ್ ಕೂಡ ಈ ತಂಡದಿಂದ ಹೊರಗುಳಿದಿದ್ದಾರೆ. ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರ ಹೆಸರೂ ತಂಡದಲ್ಲಿಲ್ಲ. ಇನ್ನು ಮುಂಬರುವ ಏಷ್ಯಾಕಪ್ ಟಿ20 ಸ್ವರೂಪದಲ್ಲಿ ನಡೆಯಲಿರುವುದರಿಂದ ಯುವ ಆಟಗಾರರಿಗೆ ಆದ್ಯತೆ ನೀಡಲಾಗಿದೆ. ಇದೇ ಕಾರಣದಿಂದಾಗಿ ಕೆಎಲ್ ರಾಹುಲ್ಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ.
ಸೂರ್ಯಕುಮಾರ್ ಯಾದವ್ (ನಾಯಕ), ಶುಬ್ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಆರ್ಶ್‌ದೀಪ್ ಸಿಂಗ್, ಕುಲದೀಪ್ ಯಾದವ್, ಸಂಜುತ್ ಯಾದವ್. ಹೆಚ್ಚುವರಿ ಆಟಗಾರರು ಪ್ರಸಿದ್ಧ್ ಕೃಷ್ಣ, ಯಶಸ್ವಿ ಜೈಸ್ವಾಲ್, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್ ಮತ್ತು ಧ್ರುವ್ ಜುರೆಲ್.
Advertisement