

ರಾಯ್ಪುರ: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ದಾಖಲೆಯ ಜಯ ದಾಖಲಿಸಿದ್ದು, ಬೃಹತ್ ರನ್ ಚೇಸ್ ಮಾಡಿ ಇತಿಹಾಸ ಬರೆದಿದೆ.
ಭಾರತ ನೀಡಿದ್ದ 359 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ಮಾರ್ಕ್ರಾಮ್ ಶತಕದ ನೆರವಿನಿಂದ 49.2 ಓವರ್ ನಲ್ಲಿ 6 ವಿಕೆಟ್ ಕಳೆದುಕೊಂಡು 359 ರನ್ ಗಳಿಸಿ 4 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತು.
ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 1-1ರಲ್ಲಿ ಸಮಬಲ ಸಾಧಿಸಿದೆ.
ರಾಯ್‌ಪುರದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಏಕದಿನದಲ್ಲಿ ಭಾರತ ತಂಡ ಸೋಲನ್ನಪ್ಪಿದೆ. ಕೊಹ್ಲಿ, ಗಾಯಕ್ವಾಡ್ ಶತಕಗಳ ನೆರವಿನಿಂದ 358 ರನ್ ಗಳಿಸಿದ್ದರೂ, ಅನನುಭವಿ ಬೌಲಿಂಗ್ ಹಾಗೂ ಇಬ್ಬನಿ ಪರಿಣಾಮ ಭಾರತ ತಂಡ ಹೀನಾಯ ಸೋಲು ದಾಖಲಿಸಿತು.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ವಿರಾಟ್ ಕೊಹ್ಲಿ (102), ರುತುರಾಜ್ ಗಾಯಕ್ವಾಡ್ (105) ಶತಕ ಮತ್ತು ನಾಯಕ ಕೆಎಲ್ ರಾಹುಲ್ (66) ಅರ್ಧಶತಕದ ನೆರವಿನಿಂದ ನಿಗಧಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 358 ರನ್ ಕಲೆಹಾಕಿತು.
ಈ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತದ ಹೊರತಾಗಿಯೂ ಮಾರ್ಕ್ರಾಮ್ (110)ಶತಕ, ಬ್ರೀಟ್ಜ್ಕೆ (68), ಬ್ರೇವಿಸ್ (54 ರನ್) ಅರ್ಧಶತಕ ಮತ್ತು ನಾಯಕ ಬವುಮಾ 46 ರನ್ ಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ 49.2 ನಲ್ಲಿ 6 ವಿಕೆಟ್ ನಷ್ಟಕ್ಕೆ 362 ರನ್ ಕಲೆಹಾಕಿ 4 ವಿಕೆಟ್ ಅಂತರದಲ್ಲಿ ಜಯಭೇರಿ ಭಾರಿಸಿತು.
ಭಾರತದ ಪರ ಅರ್ಶ್ ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ತಲಾ 2 ವಿಕೆಟ್ ಗಳಿಸಿದರೆ, ಹರ್ಷಿತ್ ರಾಣಾ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.
Advertisement