

ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ.
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
5 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸಮಬಲ ಸಾಧಿಸಿದ್ದು, ಸರಣಿ ಮೇಲೆ ಹಿಡಿತ ಸಾಧಿಸಲು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಪ್ರಮುಖವಾಗಿವೆ.
ಭಾರತ ತಂಡದಲ್ಲಿ 2 ಬದಲಾವಣೆ
ಇನ್ನು ಇಂದಿನ ಪಂದ್ಯಕ್ಕಾಗಿ ಭಾರತ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು, ಅಕ್ಸರ್ ಪಟೇಲ್ ಮತ್ತು ಜಸ್ ಪ್ರೀತ್ ಬುಮ್ರಾ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ವೇಗಿ ಹರ್ಷಿತ್ ರಾಣಾ ಮತ್ತು ಸ್ಪಿನ್ನರ್ ಕುಲದೀಪ್ ಯಾದವ್ ತಂಡ ಸೇರಿಕೊಂಡಿದ್ದಾರೆ.
ತಂಡಗಳು ಇಂತಿವೆ
ದಕ್ಷಿಣ ಆಫ್ರಿಕಾ: ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ (ನಾಯಕ), ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೊನೊವನ್ ಫೆರೆರಾ, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಆನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ಒಟ್ನೀಲ್ ಬಾರ್ಟ್‌ಮನ್
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ
Advertisement