

ಢಾಕಾ: ಕ್ರಿಕೆಟ್ ಲೋಕದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೈದಾನದಲ್ಲೇ ತಂಡವೊಂದರ ಕೋಚ್ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.
ಹೌದು.. ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ನಲ್ಲಿ ಈ ಘಟನೆ ನಡೆದಿದ್ದು, ಬಿಪಿಎಲ್ (ಬಾಂಗ್ಲಾದೇಶ ಪ್ರೀಮಿಯರ್ ಲೀಗ್) ಪಂದ್ಯದ ವೇಳೆ ಢಾಕಾ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಬೂಬ್ ಅಲಿ ಜಾಕಿ ಹೃದಯಾಘಾತದಿಂದ ಮೈದಾನದಲ್ಲಿ ನಿಧನರಾಗಿದ್ದಾರೆ.
ಢಾಕಾ ಕ್ಯಾಪಿಟಲ್ಸ್ vs ರಾಜ್‌ಶಾಹಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಈ ದುರಂತ ಸಂಭವಿಸಿದ್ದು, ಪಂದ್ಯ ಪ್ರಾರಂಭವಾಗುವ ಮೊದಲು ಜಾಕಿ ಅಸ್ವಸ್ಥರಾದರು.
ಅವರು ಮೈದಾನದಲ್ಲಿ ಕುಸಿದು ಬಿದ್ದರು. ವೈದ್ಯಕೀಯ ತಂಡವು ಅವರಿಗೆ ಚಿಕಿತ್ಸೆ ನೀಡಿ ಸಿಪಿಆರ್ ನೀಡಿತು. ನಂತರ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆಸ್ಪತ್ರೆಗೆ ಕರೆದೊಯ್ಯಲಾದ ನಂತರ, ವೈದ್ಯರು ಅವರನ್ನು ಪರೀಕ್ಷಿಸಿ ಐಸಿಯುಗೆ ದಾಖಲಿಸಿದರು, ಅಲ್ಲಿ ಅವರು ಸ್ವಲ್ಪ ಸಮಯದ ನಂತರ ನಿಧನರಾದರು.
ಈ ಬಗ್ಗೆ ಮಾಹಿತಿ ನೀಡಿದ ಫ್ರಾಂಚೈಸಿ, 'ಢಾಕಾ ಕ್ಯಾಪಿಟಲ್ಸ್‌ನ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ ಅಭ್ಯಾಸದ ಸಮಯದಲ್ಲಿ ಅಸ್ವಸ್ಥರಾದರು ಮತ್ತು ಮೈದಾನದಲ್ಲಿ ಕುಸಿದು ಬಿದ್ದರು. ಅವರನ್ನು ತಕ್ಷಣವೇ ಸಿಪಿಆರ್ ನೀಡಿ ಆಸ್ಪತ್ರೆಗೆ ದಾಖಲಿಸಲಾಯಿತು' ಎಂದು ಫ್ರಾಂಚೈಸಿ ಹೇಳಿಕೆ ನೀಡಿದೆ.
ಎರಡೂ ತಂಡಗಳಲ್ಲಿ ವಿಷಾಧ, ಮೌನಾಚರಣೆ
ಕೋಚ್ ಅವರ ನಿಧನದ ಸುದ್ದಿ ತಿಳಿದ ನಂತರ, ಢಾಕಾ ಕ್ಯಾಪಿಟಲ್ಸ್ ಮತ್ತು ರಾಜ್‌ಶಾಹಿ ವಾರಿಯರ್ಸ್ ತಮ್ಮ ಪಂದ್ಯದ ಇನ್ನಿಂಗ್ಸ್ ವಿರಾಮದ ಸಮಯದಲ್ಲಿ ಝಾಕಿಗಾಗಿ ಒಂದು ಕ್ಷಣ ಮೌನ ಆಚರಿಸಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದವು. ಕ್ರಿಕೆಟ್ ಪ್ರಪಂಚದಾದ್ಯಂತ ಸಂತಾಪ ಸೂಚಿಸಲಾಯಿತು.
Advertisement