Smriti Mandhana
ಸ್ಮೃತಿ ಮಂಧಾನonline desk

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸ್ಮೃತಿ ಮಂಧಾನ ವಿಶಿಷ್ಟ ದಾಖಲೆ!

ತಂಡಕ್ಕೆ ಆರಂಭಿಕರಿಬ್ಬರು ಉತ್ತಮ ಆರಂಭ ಒದಗಿಸಿಕೊಟ್ಟರು ಅದರಲ್ಲೂ ಮೊದಲ ಮೂರು ಪಂದ್ಯಗಳಲ್ಲಿ ರನ್ ಬರ ಎದುರಿಸಿದ್ದ ಸ್ಮೃತಿ ಈ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದರು.
Published on

ತಿರುವನಂತಪುರಂ: ತಿರುವನಂತಪುರಂ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿದ್ದು, 222 ರನ್ ಟಾರ್ಗೆಟ್ ನೀಡಿದೆ. ತಂಡಕ್ಕೆ ಆರಂಭಿಕರಿಬ್ಬರು ಉತ್ತಮ ಆರಂಭ ಒದಗಿಸಿಕೊಟ್ಟರು ಅದರಲ್ಲೂ ಮೊದಲ ಮೂರು ಪಂದ್ಯಗಳಲ್ಲಿ ರನ್ ಬರ ಎದುರಿಸಿದ್ದ ಸ್ಮೃತಿ ಈ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದರು.

ಸ್ಮೃತಿ ಮಂಧಾನ ಈ ಪಂದ್ಯದಲ್ಲಿ ರನ್ ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್​ಗಳ ಗಡಿ ದಾಟಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಭಾರತದ ಪರ ಈ ಸಾಧನೆ ಮಾಡಿದ ಎರಡನೇ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ. ಸ್ಮೃತಿಗೂ ಮೊದಲು ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಈ ಸಾಧನೆ ಮಾಡಿದ್ದರು.

Smriti Mandhana
ಮತ್ತೊಂದು ಕ್ರಿಕೆಟ್ ದುರಂತ: ಕೋಚ್ ಗೆ ಹೃದಯಾಘಾತ, ಮೈದಾನದಲ್ಲೇ ಸಾವು!

ಭಾರತದ ಪರ ಇದುವರೆಗೆ ಏಳು ಟೆಸ್ಟ್‌ ಪಂದ್ಯಗಳನ್ನಾಡಿರುವ ಸ್ಮೃತಿ ಇದರಲ್ಲಿ 629 ರನ್‌ಗಳು ಮತ್ತು 117 ಏಕದಿನ ಪಂದ್ಯಗಳಲ್ಲಿ 5,322 ರನ್‌ಗಳನ್ನು ಗಳಿಸಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 4000 ಕ್ಕೂ ಅಧಿಕ ರನ್ ಕಲೆಹಾಕಿರುವ ಸ್ಮೃತಿ ಇದೀಗ ಭಾರತ ಮಹಿಳಾ ಕ್ರಿಕೆಟ್​ನಲ್ಲಿ ಐತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com