
ಮುಂಬೈ: ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ 150 ರನ್ ಗಳ ಭರ್ಜರಿ ಜಯ ದಾಖಲಿಸಿದ್ದು, ಮಾತ್ರವಲ್ಲದೇ 5 ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಲ್ಲಿ ತನ್ನದಾಗಿಸಿಕೊಂಡಿದೆ.
ಭಾರತ ನೀಡಿದ 24 8ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಕೇವಲ 10.3 ಓವರ್ ನಲ್ಲಿ 97 ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ ಇಂಗ್ಲೆಂಡ್ ವಿರುದ್ಧ 150 ರನ್ ಭರ್ಜರಿ ಜಯ ದಾಖಲಿಸಿತು.
ಇಂಗ್ಲೆಂಡ್ ಪರ ಫಿಲಿಪ್ ಸಾಲ್ಟ್ 55ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರು. ಆದರೆ ಅವರಿಗೆ ಉಳಿದಾವ ಆಟಗಾರರಿಂದಲೂ ಉತ್ತಮ ಸಾಥ್ ದೊರೆಯಲಿಲ್ಲ. ಜೇಕಬ್ ಬೆಥೆಲ್ 10 ರನ್ ಗಳಿಸಿದ್ದು ಬಿಟ್ಟರೆ ಉಳಿದೆಲ್ಲಾ ಆಟಗಾರರೂ ಒಂದಂಕಿ ಮೊತ್ತಕ್ಕೆ ಔಟಾಗಿದ್ದು ಇಂಗ್ಲೆಂಡ್ ಪತನಕ್ಕೆ ಕಾರಣವಾಯಿತು.
ಅಂತಿಮವಾಗಿ ಇಂಗ್ಲೆಂಡ್ ತಂಡ ಕೇವಲ 10.3 ಓವರ್ ನಲ್ಲಿ 97 ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ ಇಂಗ್ಲೆಂಡ್ ವಿರುದ್ಧ 150 ರನ್ ಭರ್ಜರಿ ಜಯ ದಾಖಲಿಸಿತು. ಅಲ್ಲದೆ 5 ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಲ್ಲಿ ತನ್ನದಾಗಿಸಿಕೊಂಡಿತು.
ಭಾರತ ಭರ್ಜರಿ ಬೌಲಿಂಗ್
ಇನ್ನು ಇಂಗ್ಲೆಂಡ್ ತಂಡದ ಹೀನಾಯ ಪ್ರದರ್ಶನಕ್ಕೆ ಭಾರತದ ಬೌಲರ್ ಗಳ ಆರ್ಭಟವೇ ಕಾರಣ. ಭಾರತದ ಪರ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಮಹಮದ್ ಶಮಿ 3 ವಿಕೆಟ್ ಕಬಳಿಸಿದರೆ, ವರಣ್ ಚಕ್ರವರ್ತಿ, ಶಿವಂ ದುಬೆ, ಅಭಿಷೇಕ್ ಶರ್ಮಾ ತಲಾ 2 ವಿಕೆಟ್ ಪಡೆದರು. ರವಿ ಬಿಷ್ಣೋಯ್ 1 ವಿಕೆಟ್ ಪಡೆದರು.
Advertisement