
ಮುಂಬೈ: ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತದ ಅಭಿಷೇಕ್ ಶರ್ಮಾ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.
ಹೌದು.. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 5ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ ಕೇವಲ 37 ಎಸೆತಗಳಲ್ಲಿ ಶತಕ ಸಿಡಿಸಿದರು. ಅವರ ಈ ಅದ್ಭುತ ಇನ್ನಿಂಗ್ಸ್ ನಲ್ಲಿ ಬರೊಬ್ಬರಿ 11 ಇನ್ನಿಂಗ್ಸ್ ಮತ್ತು 7 ಬೌಂಡರಿಗಳು ಸೇರಿವೆ.
ಐತಿಹಾಸಿಕ ದಾಖಲೆ!
ಈ ಅದ್ಭುತ ಇನ್ನಿಂಗ್ಸ್ ಮೂಲಕ ಭಾರತದ ಪರ ಅಭಿಷೇಕ್ ಶರ್ಮಾ ಅದ್ಭುತ ದಾಖಲೆ ನಿರ್ಮಿಸಿದ್ದು, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ವೇಗದ ಶತಕ ಸಿಡಿಸಿದ ಭಾರತದ 2ನೇ ಮತ್ತು ಜಗತ್ತಿನ 3ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಅಂತಾರಾಷ್ಟ್ರೀಯ ಟಿ20 ಪಂದ್ಯವೊಂದರಲ್ಲಿ ದಾಖಲಾದ ವೇಗದ ಶತಕವಾಗಿದೆ.
ನಂತರದ ಸ್ಥಾನದಲ್ಲಿ ಭಾರತದ ರೋಹಿತ್ ಶರ್ಮಾ ಇದ್ದು, 2017ರಲ್ಲಿ ಶ್ರೀಲಂಕಾ ವಿರುದ್ಧ ರೋಹಿತ್ ಕೂಡ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ ಅಭಿಷೇಕ್ ಶರ್ಮಾ ಕೇವಲ 37 ಎಸೆತಗಳಲ್ಲಿ ಶತಕ ಸಿಡಿಸಿ ಈ ಪಟ್ಟಿ ಸೇರ್ಪಡೆಯಾಗಿದ್ದಾರೆ.
Fastest T20I hundreds in T20Is bw FM teams (by balls)
35 David Miller vs Ban Potchefstroom 2017
35 Rohit Sharma vs SL Indore 2017
37 Abhishek Sharma vs Eng Wankhede 2025
39 Johnson Charles vs SA Centurion 2023
40 Sanju Samson vs Ban Hyderabad 2024
Advertisement