CCL 2025: ಬಿಗ್ ಬಾಸ್ ಖ್ಯಾತಿಯ ತ್ರಿವಿಕ್ರಮ್ ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಸೇರ್ಪಡೆ; ಕ್ಯಾಪ್ ನೀಡಿದ ಕಿಚ್ಚ ಸುದೀಪ್‌

ಫೆಬ್ರುವರಿ 8ರಂದು ಪಂದ್ಯಾವಳಿ ಆರಂಭವಾಗಲಿದ್ದು ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.
ಕರ್ನಾಟಕ ಬುಲ್ಡೋಜರ್ಸ್ vs ತೆಲುಗು ವಾರಿಯರ್ಸ್
ಕರ್ನಾಟಕ ಬುಲ್ಡೋಜರ್ಸ್ vs ತೆಲುಗು ವಾರಿಯರ್ಸ್
Updated on

ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) 2025ರ 11 ಆವೃತ್ತಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಫೆಬ್ರುವರಿ 8ರಿಂದ ಪಂದ್ಯಾವಳಿ ಆರಂಭವಾಗಲಿದ್ದು, 8 ಚಿತ್ರರಂಗಗಳ ತಂಡಗಳು ಆಡಲಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಎಲ್ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ರಿನ್ಹೋಸ್ ತಂಡವು ಬೆಂಗಾಲ್ ಟೈಗರ್ಸ ವಿರುದ್ಧ ಸೆಣೆಸಲಿದೆ. ಅದೇ ದಿನ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡವು ತೆಲುಗು ವಾರಿಯರ್ಸ್ ವಿರುದ್ಧ ಆಡಲಿದೆ.

ಇತ್ತೀಚೆಗಷ್ಟೇ ಬಿಗ್ ಬಾಸ್ ಕನ್ನಡ ಸೀಸನ್ 11 ಮುಕ್ತವಾಯವಾಗಿದ್ದು, ರನ್ನರ್ ಅಪ್ ಆಗಿದ್ದ ತ್ರಿವಿಕ್ರಮ್ ಇದೀಗ ಅಧಿಕೃತವಾಗಿ ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ತಂಡದ ನಾಯಕ ಕಿಚ್ಚ ಸುದೀಪ್‌ ಕರ್ನಾಟಕ ಬುಲ್ಡೋಜರ್ಸ್ ತಂಡದ ಕ್ಯಾಪ್ ನೀಡುವ ಮೂಲಕ ತ್ರಿವಿಕ್ರಮ್ ಅವರನ್ನು ತಂಡಕ್ಕೆ ಸ್ವಾಗತಿಸಿದ್ದಾರೆ.

ಈಗಾಗಲೇ ಸಿಸಿಎಲ್ 2025ರ ಪಂದ್ಯಾವಳಿಗಾಗಿ ತಂಡವನ್ನು ಪ್ರಕಟಿಸಲಾಗಿತ್ತು. ಇದೀಗ ತ್ರವಿಕ್ರಮ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವ ಕುರಿತು ಕರ್ನಾಟಕ ಬುಲ್ಡೋಜರ್ಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ತ್ರಿವಿಕ್ರಮ್ ಇನ್ ಆಗಿರುವುದರಿಂದ ತಂಡದಲ್ಲಿ ಸ್ಥಾನ ಪಡೆದಿದ್ದ ಸಿದ್ ಮೂಲಿಮನಿ ಅಲಭ್ಯ ಎಂದು ಹೇಳಿದೆ.

ತ್ರಿವಿಕ್ರಮ್‌ ಈಗಾಗಲೇ ಅಭ್ಯಾಸವನ್ನು ಕೂಡ ಆರಂಭಿಸಿದ್ದಾರೆ. ಎರಡು ಬಾರಿ ಪ್ರಶಸ್ತಿ ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಮೂರನೇ ಬಾರಿಯೂ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಫೆಬ್ರುವರಿ 8ರಂದು ಪಂದ್ಯಾವಳಿ ಆರಂಭವಾಗಲಿದ್ದು ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಪಂದ್ಯದಲ್ಲಿ ಚೆನ್ನೈ ರಿನ್ಹೋಸ್ ಬೆಂಗಾಲ್ ಟೈಗರ್ಸ್ ತಂಡವನ್ನು ಎದುರಿಸಲಿದ್ದು, ಸಂಜೆ 6 ಗಂಟೆಯಿಂದ ಆರಂಭವಾಗುವ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತೆಲುಗು ವಾರಿಯರ್ಸ್ ತಂಡವನ್ನು ಎದುರಿಸಲಿದೆ.

2024ರ ಸಿಸಿಎಲ್ ಪಂದ್ಯಾವಳಿಯಲ್ಲಿ ಫೈನಲ್ ಪ್ರವೇಶಿಸಿದ್ದ ಕರ್ನಾಟಕ ಬುಲ್ಡೋಜರ್ಸ್, ಬೆಂಗಾಲ್ ಟೈಗರ್ಸ್ ವಿರುದ್ಧ ಸೋಲುವ ಮೂಲಕ ರನ್ನರ್ ಅಪ್ ಸ್ಥಾನ ಪಡೆದಿತ್ತು. ತಂಡವು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದು, ಫೆಬ್ರುವರಿ 8 ರಂದು ಬೆಂಗಳೂರಿನಲ್ಲೇ ಬುಲ್ಡೋಜರ್ಸ್ ಮೊದಲ ಪಂದ್ಯ ಆಡಲಿದೆ.

ಕರ್ನಾಟಕ ಬುಲ್ಡೋಜರ್ಸ್ ತಂಡ

ಕಿಚ್ಚ ಸುದೀಪ್ (ನಾಯಕ), ಗೋಲ್ಡನ್ ಸ್ಟಾರ್ ಗಣೇಶ್, ಕಾರ್ತಿಕ್ ಜಯರಾಮ್, ಡಾರ್ಲಿಂಗ್ ಕೃಷ್ಣ, ರಾಜೀವ್ ಹನು, ಚಂದನ್ ಕುಮಾರ್, ಪ್ರತಾಪ್ ನಾರಾಯಣ್, ನಿರೂಪ್ ಭಂಡಾರಿ, ಅನೂಪ್ ಭಂಡಾರಿ, ಕರಣ್ ಆರ್ಯನ್, ಮಂಜುನಾಥ್ ಗೌಡ, ಸಾಗರ್ ಗೌಡ, ಅಲಕಾನಂದ, ತ್ರಿವಿಕ್ರಮ್.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com