
ಕಟಕ್: ಭಾರತ ವಿರುದ್ಧ ಭಾನುವಾರ ಇಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ನಿರೀಕ್ಷೆಯಂತೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಇಂಗ್ಲೆಂಡ್ ತಂಡದಲ್ಲಿಯೂ ಮೂರು ಬದಲಾವಣೆಗಳನ್ನು ಮಾಡಲಾಗಿದ್ದು, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ ಮತ್ತು ಜೋಫ್ರಾ ಆರ್ಚರ್ ಬದಲಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮಾರ್ಕ್ ವುಡ್, ಗಸ್ ಅಟ್ಕಿನ್ಸನ್ ಮತ್ತು ಜೇಮೀ ಓವರ್ಟನ್ ಅವರನ್ನು ಕರೆತಂದಿದೆ.
ಭಾರತ ತಂಡದಲ್ಲಿ ಮತ್ತೆ ಫಿಟ್ ಆಗಿರುವ ವಿರಾಟ್ ಕೊಹ್ಲಿ ಅವರಿಗೆ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಜಾಗ ಬಿಟ್ಟುಕೊಟ್ಟಿದ್ದಾರೆ. ಕುಲದೀಪ್ ಯಾದವ್‌ಗೆ ವಿಶ್ರಾಂತಿ ನೀಡಲಾಗಿದ್ದು, ಲೆಗ್ ಸ್ಪಿನ್ನರ್ ವರುಣ್ ಚಕ್ರವರ್ತಿ ಏಕದಿನಕ್ಕೆ ಪದಾರ್ಪಣೆ ಮಾಡಿದ್ದಾರೆ.
ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ದಾಖಲಿಸಿದ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಸದ್ಯ ಐದು ಓವರ್‌ಗಳ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ ಇಂಗ್ಲೆಂಡ್ 38 ರನ್ ಗಳಿಸಿದೆ.
ಉಭಯ ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ ಮತ್ತು ವರುಣ್ ಚಕ್ರವರ್ತಿ.
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮಿ ಓವರ್‌ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.
Advertisement