
ಮುಂಬೈ: ಐಪಿಎಲ್ 2025ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯಾ ನಿಷೇಧದ ಭೀತಿ ಎದುರಿಸುತ್ತಿದ್ದಾರೆ.
ಹೌದು.. ಐಪಿಎಲ್ 2025 ಕ್ರಿಕೆಟ್ ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತವೊಂದು ಎದುರಾಗಿದ್ದು ಈ ಹಿಂದೆ ಮಾಡಿದ್ದ ತಪ್ಪಿನಿಂದಾಗಿ ತಂಡದ ಸ್ಟಾರ್ ಆಟಗಾರ ನಿಷೇಧದ ಭೀತಿ ಎದುರಿಸುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ನಿಷೇಧದ ಶಿಕ್ಷೆಗೆ ತುತ್ತಾಗುತ್ತಿದ್ದು, ಇದೇ ಕಾರಣಕ್ಕೆ ಅವರು ಒಂದು ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಮುಂಬರುವ ಮಾರ್ಚ್ 23 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಲಿದೆ. ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದಿಲ್ಲ.
ಕಾರಣ ಏನು?
ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್ ತಂಡವು ಮೂರು ಪಂದ್ಯಗಳಲ್ಲಿ ಸ್ಲೋ ಓವರ್ ತಪ್ಪು ಮಾಡಿತ್ತು. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ. ಇದೀಗ ಅದರ ಶಿಕ್ಷಯಾಗಿ ಐಪಿಎಲ್ 2025 ರ ಮೊದಲ ಪಂದ್ಯದಿಂದ ಪಾಂಡ್ಯ ಹೊರಗುಳಿಯಲಿದ್ದಾರೆ. ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.
ಏನಿದು ನಿಯಮ?
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ, ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ ತಲಾ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ. ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.
ಅದರಂತೆ ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (2 ಬಾರಿ) ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2025ರ ಮೊದಲ ಪಂದ್ಯದಿಂದ ಬ್ಯಾನ್ ಆಗಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಅಲಭ್ಯರಾಗುವುದು ಖಚಿತ ಎನ್ನಬಹುದು.
ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18ರ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ KKR ಮತ್ತು RCB ತಂಡಗಳು ಮುಖಾಮುಖಿಯಾಗಲಿದೆ.
Advertisement