
ದುಬೈ: ಗುರುವಾರ ಇಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಫಿಟ್ ಆದ ಬಳಿಕ ಚಾಂಪಿಯನ್ಸ್ ಟ್ರೋಫಿ ಆಡಲು ಮೊಹಮ್ಮದ್ ಶಮಿ ವಾಪಸಾಗಿದ್ದಾರೆ. ವರುಣ್ ಚಕ್ರವರ್ತಿ ಅಥವಾ ಕುಲದೀಪ್ ಯಾದವ್ ನಡುವೆ ಯಾರು ಅವಕಾಶ ಪಡೆಯುತ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದ್ದು ಕುಲದೀಪ್ ಯಾದವ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಂಗ್ಲಾದೇಶವು ಮೂವರು ಸೀಮರ್‌ಗಳು ಮತ್ತು ಇಬ್ಬರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿದೆ. ವೇಗಿ ನಹಿದ್ ರಾಣಾ ಬದಲಿಗೆ ತಂಜಿಮ್ ಹಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಂಝಿದ್ ಹಸನ್, ಸೌಮ್ಯ ಸರ್ಕಾರ್, ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್.
Advertisement