ICC Champions Trophy 2025: Shubman Gill ಶತಕ ಒಂದು.. ದಾಖಲೆ ಹಲವು!; ಎಲೈಟ್ ಗ್ರೂಪ್ ಸೇರ್ಪಡೆ

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಶುಭ್ ಮನ್ ಗಿಲ್ 129 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 9 ಬೌಂಡರಿಗಳ ನೆರವಿನಿಂದ ಅಜೇಯ 101 ರನ್ ಕಲೆಹಾಕಿ ಭಾರತಕ್ಕೆ ಅಮೋಘ ಜಯ ತಂದುಕೊಟ್ಟರು.
Shubman Gill Breaks Many records with his one century
ಶುಭ್ ಮನ್ ಗಿಲ್
Updated on

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಶುಭ್ ಮನ್ ಗಿಲ್ ಇದೊಂದು ಶತಕದ ಮೂಲಕ ಹಲವು ದಾಖಲೆಗಳ ನಿರ್ಮಾಣ ಮಾಡಿದ್ದಾರೆ.

ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಶುಭ್ ಮನ್ ಗಿಲ್ 129 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 9 ಬೌಂಡರಿಗಳ ನೆರವಿನಿಂದ ಅಜೇಯ 101 ರನ್ ಕಲೆಹಾಕಿ ಭಾರತಕ್ಕೆ ಅಮೋಘ ಜಯ ತಂದುಕೊಟ್ಟರು. ಅಂತೆಯೇ ಈ ಒಂದು ಶತಕದ ಮೂಲಕ ಗಿಲ್ ಹಲವು ದಾಖಲೆಗಳಿಗೆ ಪಾತ್ರರಾಗಿದ್ದಾರೆ.

ಐಸಿಸಿ ಟೂರ್ನಿಯಲ್ಲಿ ಮೊದಲ ಶತಕ

ಬಾಂಗ್ಲಾದೇಶ ವಿರುದ್ಧ ಶತಕದ ಮೂಲಕ ಗಿಲ್ ಐಸಿಸಿ ಟೂರ್ನಿಯಲ್ಲಿ ಮೊದಲ ಬಾರಿಗೆ ಶತಕ ಬಾರಿಸಿದ ಸಾಧನೆ ಮಾಡಿದರು. ಅಂತೆಯೇ ಇದು ಗಿಲ್ ಗೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ವೃತ್ತಿ ಜೀವನದ 8ನೇ ಶತಕವಾಗಿದೆ. ಇದಕ್ಕೂ ಮುನ್ನ ಅವರು ತಮ್ಮ ಕೊನೆಯ ಏಕದಿನ ಪಂದ್ಯದಲ್ಲಿಯೂ ಅಂದರೆ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿದ್ದರು.

Shubman Gill Breaks Many records with his one century
ICC Champions Trophy 2025: ಶತಕ ಗಳಿಸಲು 'ಅದೊಂದು ಸಂದೇಶ' ಕಾರಣ- Shubhman gill

ಉತ್ತಮ ಫಾರ್ಮ್ ನಲ್ಲಿ ಗಿಲ್

ಈ ಶತಕದ ಮೂಲಕ ಗಿಲ್ ಮತ್ತೊಂದು ಅಮೋಘ ಇನ್ನಿಂಗ್ಸ್ ಆಡಿದ್ದು, ಗಿಲ್ ಕಳೆದ 4 ಏಕದಿನ ಇನ್ನಿಂಗ್ಸ್‌ಗಳಲ್ಲಿ 50+ ರನ್‌ಗಳ ಗಡಿಯನ್ನು ದಾಟಿದ್ದಾರೆ, ಇದು ಪ್ರಸ್ತುತ ಅವರು ಎಷ್ಟು ಉತ್ತಮ ಫಾರ್ಮ್‌ನಲ್ಲಿದ್ದಾರೆ ಎಂಬುದನ್ನು ತೋರಿಸುತ್ತದೆ.

ಧವನ್ ದಾಖಲೆ ಪತನ

ಇದೇ ವೇಳೆ ಗಿಲ್ ಭಾರತ ಪರ ಏಕದಿನ ಪಂದ್ಯಗಳಲ್ಲಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 8 ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗಿಲ್ 51 ಏಕದಿನ ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರೆ, ಇದಕ್ಕೂ ಮೊದಲು 57 ಏಕದಿನ ಇನ್ನಿಂಗ್ಸ್‌ಗಳಲ್ಲಿ 8 ಶತಕಗಳನ್ನು ಬಾರಿಸಿದ್ದ ಶಿಖರ್ ಧವನ್ ಅವರ ಹೆಸರಿನಲ್ಲಿ ಈ ದಾಖಲೆ ಇತ್ತು. ಇದೀಗ ಆ ದಾಖಲೆ ಪತನವಾಗಿದೆ.

Shubman Gill Breaks Many records with his one century
ICC Champions Trophy 2025: ಬಾಂಗ್ಲಾ ವಿರುದ್ಧ ಬೇಗನೇ ಔಟ್; ಬೇಡದ ದಾಖಲೆ ಬರೆದ Virat Kohli, ಅಪರೂಪದ ರೆಕಾರ್ಡ್ ಕೂಡ ಮಿಸ್

ಎಲೈಟ್ ಗ್ರೂಪ್ ಸೇರ್ಪಡೆ

ಈ ಶತಕದೊಂದಿಗೆ ಶುಭ್​ಮನ್ ಗಿಲ್ ಕೂಡ ಸಚಿನ್ ತೆಂಡೂಲ್ಕರ್ ಇರುವ ಎಲೈಟ್ ಗ್ರೂಪ್ ಸೇರ್ಪಡೆಯಾದರು. ವಾಸ್ತವವಾಗಿ, ಗಿಲ್ ಚಾಂಪಿಯನ್ಸ್ ಟ್ರೋಫಿಯ ಚೊಚ್ಚಲ ಪಂದ್ಯದಲ್ಲೇ ಶತಕ ಗಳಿಸಿದ ನಾಲ್ಕನೇ ಭಾರತೀಯ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಸಚಿನ್ ತೆಂಡೂಲ್ಕರ್, ಮೊಹಮ್ಮದ್ ಕೈಫ್ ಮತ್ತು ಶಿಖರ್ ಧವನ್ ಈ ಸಾಧನೆ ಮಾಡಿದ್ದರು. 1998 ರಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೊಚ್ಚಲ ಪಂದ್ಯದಲ್ಲೇ ಸಚಿನ್ ತೆಂಡೂಲ್ಕರ್, 2002 ರಲ್ಲಿ ಮೊಹಮ್ಮದ್ ಕೈಫ್ ಮತ್ತು 2013 ರಲ್ಲಿ ಶಿಖರ್ ಧವನ್ ಶತಕ ಸಿಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com