
ಮುಂಬಯಿ: ಭಾರತೀಯ ಕ್ರಿಕೆಟ್ ತಂಡದ ಕ್ರಿಕೆಟಿಗ ಯುಜುವೇಂದ್ರ ಚಹಲ್ ಮತ್ತು ಪತ್ನಿ ಧನಶ್ರೀ ವರ್ಮಾ ವಿಚ್ಛೇದನದ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಮಾತು ಕೇಳಿ ಬರುತ್ತಿದ್ದವು. ಇಬ್ಬರ ನಡುವೆ ಸಂಬಂಧ ಸರಿಯಿಲ್ಲ ಎನ್ನುವ ಬಗ್ಗೆ ವದಂತಿಗಳು ಹರಿದಾಡುತ್ತಿರುವಾಗಲೇ, ಯುಜ್ವೇಂದ್ರ ಮತ್ತು ಧನಶ್ರೀ ವಿಚ್ಛೇದನ ಪಡೆದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದಾರೆ. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.
ಡಿವೋರ್ಸ್ ಪಡೆದ ನಂತರ ಚಹಲ್ ಕೈಮಗಿಯುತ್ತಿರುವ ಹನುಮಂತನ ಫೋಟೋ ಹಾಕಿದ್ದಾರೆ. ದೇವರು ನನ್ನನ್ನು ಎಷ್ಟೋ ಬಾರಿ ಕಾಪಾಡಿದ್ದಾನೆ. ನಾನು ಅವುಗಳನ್ನು ಸಂಖ್ಯೆಯಲ್ಲಿ ಎಣಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ದೇವರು ನನ್ನ ಅರಿವಿಗೆ ಬಾರದೆಯೋ ನನ್ನ ಜೊತೆ ನಿಂತಿದ್ದಾನೆ. ನನಗೆ ತಿಳಿಯದೇ ನನ್ನನ್ನು ಬೆಂಬಲಿಸಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು ಎಂದು ಚಹಲ್ ಬರೆದುಕೊಂಡಿದ್ದಾರೆ.
Advertisement