
ಸೂರತ್‌ನಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) 2025ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಪಂಜಾಬ್ ದಿ ಶೇರ್ ವಿರುದ್ಧ 2 ರನ್‌ಗಳಿಂದ ರೋಚಕ ಸೋಲು ಕಂಡಿದೆ. ಈಗಾಗಲೇ ಮೂರು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ಪಂದ್ಯವು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.
ನಾಯಕ ಕಿಚ್ಚ ಸುದೀಪ್ ಅನೂಪ್ ಭಂಡಾರಿಗೆ ವಿಶ್ರಾಂತಿ ನೀಡಿ, ಅರ್ಜುನ್ ಯೋಗಿಯನ್ನು ಕರೆತಂದಿದ್ದರು. ಟಾಸ್ ಗೆದ್ದ ಪಂಜಾಬ್ ದಿ ಶೇರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು. ಪಂಜಾಬ್ ಪರ, ಬಬ್ಬಲ್ ರೈ 38 ರನ್, ರಾಹುಲ್ ಜೈಟ್ಲಿ 18 ರನ್, ನಿಂಜಾ 17 ರನ್, ಅನುಜ್ ಖುರಾನ 21 ರನ್ ಗಳಿಸಿದರು.
ಬಳಿಕ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 91 ರನ್ ಕಲೆಹಾಕಿತು. ಈ ಮೂಲಕ 30 ರನ್‌ಗಳ ಹಿನ್ನಡೆ ಅನುಭವಿಸಿತು.
ಎರಡನೇ ಇನಿಂಗ್ಸ್‌ನಲ್ಲಿ ಪಂಜಾಬ್ ದಿ ಶೇರ್ ತಂಡವನ್ನು ಕರ್ನಾಟಕ ಬುಲ್ಡೋಜರ್ಸ್ ತಂಡದ ಬೌಲರ್‌ಗಳು ಕಡಿಮೆ ರನ್‌ಗಳಿಗೆ ಕಟ್ಟಿಹಾಕಿದರು. ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಪಂಜಾಬ್ ತಂಡ 94 ರನ್ ಕಲೆಹಾಕಿತು. ಪಂಜಾಬ್ ನೀಡಿದ 125 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ಬುಲ್ಡೋಜರ್ಸ್ ಎರಡನೇ ಇನಿಂಗ್ಸ್‌ನಲ್ಲಿ ಮೂರು ವಿಕೆಟ್ ನಷ್ಟಕ್ಕೆ 2 ರನ್‌ಗಳಿಂದ ರೋಚಕ ಸೋಲು ಕಂಡಿತು.
Advertisement