
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಾಣುವ ಮೂಲಕ ಭಾರತ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯನ್ನು 3-1 ಅಂತರದಲ್ಲಿ ಕಳೆದುಕೊಂಡಿದ್ದು, ಮಾತ್ರವಲ್ಲದೇ ಬರೊಬ್ಬರಿ 10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದೆ.
ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ 10 ವರ್ಷಗಳ ಬಳಿಕ ಭಾರತ ಬಾರ್ಡರ್– ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದೆ. ಸರಣಿಯನ್ನು ಭಾರತ 1–3 ಅಂತರದಿಂದ ಸೋತಿದ್ದು ಮಾತ್ರವಲ್ಲದೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದಲೂ ಹೊರಬಿದ್ದಿದೆ.
ಆಸ್ಟ್ರೇಲಿಯಾ ವಿರುದ್ಧದ ಈ ಹಿಂದಿನ ನಾಲ್ಕು ಸರಣಿಗಳಲ್ಲಿ ಭಾರತ ಗೆಲುವು ಸಾಧಿಸಿತ್ತು. ತವರಿನಲ್ಲಿ ಹಾಗೂ ಆಸ್ಟ್ರೇಲಿಯಾದಲ್ಲಿ ತಲಾ ಎರಡು ಸರಣಿಗಳನ್ನು ಭಾರತ ಗೆದ್ದಿತ್ತು. ಆದರೆ ಈ ಬಾರಿ ಅದೃಷ್ಟ ಭಾರತದ ಪರವಾಗಿರಲಿಲ್ಲ. ಪರ್ತ್‌ನಲ್ಲಿ ನಡೆದ ಸರಣಿ ಮೊದಲ ಪಂದ್ಯದಲ್ಲಷ್ಟೇ ಭಾರತ ಗೆಲುವು ಸಾಧಿಸಿತ್ತು. ಬಳಿಕ ಬ್ರಿಸ್ಬೇನ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿತ್ತು. ಆದರೆ 3 ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡಿತು.
ಕೊನೆಯ ಪಂದ್ಯದಲ್ಲಿ ಭಾರತ ನೀಡಿದ 162 ರನ್‌ಗಳನ್ನು ಕೇವಲ 27 ಓವರ್‌ಗಳಲ್ಲೇ ಆಸ್ಟ್ರೇಲಿಯಾ ಗುರಿ ಮುಟ್ಟಿತು. ಟ್ರಾವಿಸ್ ಹೆಡ್ (34) ಹಾಗೂ ಬ್ಯೂ ವೆಬ್‌ಸ್ಟರ್ (39) ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
Advertisement