ಸಿಡ್ನಿ: ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಐದನೇ ಟೆಸ್ಟ್‌ನ ಮೂರನೇ ದಿನದಂದು ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜಾ ಅವರನ್ನು ಔಟ್ ಮಾಡುವ ಮೂಲಕ 100 ಟೆಸ್ಟ್ ವಿಕೆಟ್ ಕ್ಲಬ್‌ಗೆ ಸೇರಿಕೊಂಡರು. ಇನ್ನು ಈ ವಿಶೇಷ ಕ್ಲಬ್‌ಗೆ ಪ್ರವೇಶಿಸಿದ ಸಾಧನೆ ಮಾಡಿದ ಭಾರತದ 23ನೇ ಆಟಗಾರ ಎನಿಸಿಕೊಂಡರು. ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ನಂತರ ಸಿರಾಜ್ 100 ವಿಕೆಟ್‌ಗಳನ್ನು ಪಡೆದ ಭಾರತದ ಇತ್ತೀಚಿನ ಆಟಗಾರರಾಗಿದ್ದಾರೆ. ಬುಮ್ರಾ ಅನುಪಸ್ಥಿತಿಯಲ್ಲಿ, ಸಿರಾಜ್ ದಾಳಿಯನ್ನು ಮುನ್ನಡೆಸಿದರು. ಆದರೆ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ ನಲ್ಲಿ ಕೇವಲ 1 ವಿಕೆಟ್ ಮಾತ್ರ ಪಡೆದರು.
ಮೊದಲ ಇನ್ನಿಂಗ್ಸ್‌ನಲ್ಲಿ ಅವರು ತಮ್ಮ 16 ಓವರ್‌ಗಳಲ್ಲಿ 51 ರನ್‌ಗಳನ್ನು ಬಿಟ್ಟುಕೊಟ್ಟು ಮೂರು ವಿಕೆಟ್‌ಗಳನ್ನು ಪಡೆದರು. ಆದರೆ ಅವರ ಎರಡನೇ ಇನ್ನಿಂಗ್ಸ್‌ನಲ್ಲಿ, 30 ವರ್ಷ ವಯಸ್ಸಿನವರು ಮೊದಲ ಇನ್ನಿಂಗ್ಸ್‌ನಲ್ಲಿ ತಮ್ಮ ಪ್ರದರ್ಶನವನ್ನು ಪುನರಾವರ್ತಿಸಲು ವಿಫಲರಾದರು. 12 ಓವರ್‌ಗಳ ಸ್ಪೆಲ್‌ನಲ್ಲಿ 69 ರನ್‌ಗಳನ್ನು ಬಿಟ್ಟುಕೊಟ್ಟು ಒಂದು ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾದರು. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 45 ದಿನಗಳ ರೋಮಾಂಚಕ ಕ್ರಿಕೆಟ್ ಅಂತ್ಯಕಂಡಿದ್ದು, 3-1ರ ಅಂತದ ಗೆಲುವಿನಿಂದ BGT ಸರಣಿಯನ್ನು ಆಸ್ಟ್ರೇಲಿಯಾದ ಕೈವಶ ಮಾಡಿಕೊಂಡಿದೆ.
Advertisement