ಸಮಾಜವಾದಿ ಪಕ್ಷದ ಸಂಸದೆಯೊಂದಿಗೆ ಕ್ರಿಕೆಟಿಗ Rinku Singh ನಿಶ್ಚಿತಾರ್ಥ? ಯಾರು ಈ Priya Saroj?

ಭಾರತ ತಂಡದ ಕ್ರಿಕೆಟ್ ತಾರೆ ರಿಂಕು ಸಿಂಗ್ ವಿವಾಹದ ಕುರಿತು ಸುದ್ದಿಯೊಂದು ವ್ಯಾಪಕ ವೈರಲ್ ಆಗುತ್ತಿದ್ದು, ರಿಂಕು ಸಿಂಗ್ ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ಸಂಸದೆಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
Rinku Singh-Priya Saroj
ರಿಂಕು ಸಿಂಗ್ ಪ್ರಿಯಾ ಸರೋಜ್
Updated on

ನವದೆಹಲಿ: ಭಾರತ ಕ್ರಿಕೆಟ್ ತಂಡದ ಉದಯೋನ್ಮುಖ ಕ್ರಿಕೆಟಿಗ ರಿಂಕು ಸಿಂಗ್ ಸಮಾಜವಾದಿ ಪಕ್ಷದ ಸಂಸದೆಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಹೌದು.. ಭಾರತ ತಂಡದ ಕ್ರಿಕೆಟ್ ತಾರೆ ರಿಂಕು ಸಿಂಗ್ ವಿವಾಹದ ಕುರಿತು ಸುದ್ದಿಯೊಂದು ವ್ಯಾಪಕ ವೈರಲ್ ಆಗುತ್ತಿದ್ದು, ರಿಂಕು ಸಿಂಗ್ ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ಸಂಸದೆಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ಮಚಿಲ್‌ಶಹರ್‌ನ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ರಿಂಕು ಸಿಂಗ್ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅಲ್ಲದೆ ಈ ಇಬ್ಬರು ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಅಲ್ಲಗಳೆದ ಕುಟುಂಬಸ್ಥರು

ಆದರೆ ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ವಿವಾಹ ಕುರಿತ ಈ ಸುದ್ದಿಯನ್ನು ಎರಡು ಕುಟುಂಬದವರು ಅಲ್ಲಗಳೆದಿದ್ದು, ರಿಂಕು ಸಿಂಗ್ ವಿವಾಹ ಕುರಿತು ಮಾತುಕತೆ ನಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಿಯಾ ಸರೋಜ್ ತಂದೆ ಹಾಗೂ ಸಮಾಜವಾದಿ ಪಕ್ಷದ ಮಾಜಿ ಸಂಸದ ತೂಫಾನಿ ಸರೋಜ್ ಎರಡು ಕುಟುಂಬಗಳ ನಡುವೆ ವಿವಾಹದ ಕುರಿತು ಮಾತುಕತೆ ನಡೆದಿದೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವಂತೆ ಇಲ್ಲಿಯವರೆಗೆ ಯಾವುದೇ ನಿಶ್ಚಿತಾರ್ಥ ನಡೆದಿಲ್ಲ. ಎಂಗೇಜ್​ಮೆಂಟ್ ಆದರೆ ಅದನ್ನು ಎಲ್ಲರಿಗೂ ತಿಳಿಸಲಾಗುವುದು ಎಂದಿದ್ದಾರೆ.

Rinku Singh-Priya Saroj
Team India: ಸರಣಿ ಸೋಲಿನ ಆಘಾತ; ರೋಹಿತ್ ಶರ್ಮಾ, ಗೌತಮ್ ಗಂಭೀರ್ ಬೆನ್ನಿಗೆ ನಿಂತ ಯುವರಾಜ್‌ ಸಿಂಗ್!

ಇಷ್ಟಕ್ಕೂ ಯಾರು ಈ ಪ್ರಿಯಾ ಸರೋಜ್?

ಇನ್ನು ರಿಂಕು ಸಿಂಗ್​ಹೆಸರಿನ ಜೊತೆ ತಳುಕುಹಾಕಿಕೊಂಡಿರುವ ಪ್ರಿಯಾ ಸರೋಜ್ ಬಗ್ಗೆ ಹೇಳುವುದಾದರೆ, ಇವರು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಸಂಸದೆಯಾಗಿದ್ದಾರೆ. ಕೇವಲ 25ನೇ ವಯಸ್ಸಿಗೆ ಸಂಸದರಾಗಿರುವ ಪ್ರಿಯಾ ಸರೋಜ್ ಅವರು ಬಿಜೆಪಿಯ ಹಿರಿಯ ನಾಯಕಿ ಬಿಪಿ ಸರೋಜ್ ಅವರನ್ನು ಸೋಲಿಸುವ ಮೂಲಕ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಕೀಲೆಯಾಗಿರುವ ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದಾರೆ.

ಅಂತೆಯೇ ಪ್ರಿಯಾ ಸರೋಜ್ ಅವರ ತಂದೆ ತೂಫಾನಿ ಸರೋಜ್ ಅವರು ಮಚ್ಚಿಲಿಶಹರ್ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದರು. ಅವರು 1999, 2004 ಮತ್ತು 2009ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ನಂತರ, ಅವರ ಮಗಳು ಪ್ರಿಯಾ ಸರೋಜ್ ಮಚ್ಚಿಲಿಶಹರ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ದೇಶದ ಎರಡನೇ ಕಿರಿಯ ಸಂಸದರು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇನ್ನು ಕ್ರಿಕೆಟಿಗ ರಿಂಕು ಸಿಂಗ್ ಕುರಿತು ಹೇಳುವುದಾದರೆ ಐಪಿಎಲ್ ಮೂಲಕ ತಮ್ಮ ಖ್ಯಾತಿ ಹೆಚ್ಚಿಸಿಕೊಂಡ ರಿಂಕು ಸಿಂಗ್ ಬಳಿಕ ಟಿ20 ಮೂಲಕ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದರು. ರಿಂಕು ಸಿಂಗ್ ಟೀಂ ಇಂಡಿಯಾ ಪರ ಇದುವರೆಗೆ 30 ಟಿ20 ಪಂದ್ಯಗಳಲ್ಲಿ 46ಕ್ಕೂ ಹೆಚ್ಚು ಸರಾಸರಿಯಲ್ಲಿ 507 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ ಕೂಡ 160ಕ್ಕಿಂತ ಹೆಚ್ಚಿದೆ. ಇದಲ್ಲದೆ ರಿಂಕು ಟೀಂ ಇಂಡಿಯಾ ಪರ 2 ಏಕದಿನ ಪಂದ್ಯಗಳನ್ನೂ ಆಡಿದ್ದಾರೆ. ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ ಪರ ಕಣಕ್ಕಿಳಿಯುವ ರಿಂಕು ಅವರನ್ನು ಹರಾಜಿಗೂ ಮುನ್ನವೇ ಬರೋಬ್ಬರಿ 13 ಕೋಟಿ ರೂ.ಗೆ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com