
ಕೋಲ್ಕತ್ತಾ: ಈಡನ್ ಗಾರ್ಡನ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಜಯ ಗಳಿಸಿದೆ.
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ, ಇಂಗ್ಲೆಂಡ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 132 ರನ್ ಗಳಿಗೆ ಕಟ್ಟಿಹಾಕಿತು.
ಇಂಗ್ಲೆಂಡ್ ಪರ 64 (44) ರನ್ ಗಳಿಸಿ ತಂಡದ ಪರ ಅತ್ಯುತ್ತಮ ಸ್ಕೋರ್ ದಾಖಲಿಸಿದರು.
ಭಾರತದ ಬೌಲಿಂಗ್ ವಿಭಾಗದಲ್ಲಿ ಅಬ್ಬರಿಸಿದ ವರುಣ್ ಚಕ್ರವರ್ತಿ 23 ರನ್ ನೀಡಿ 3 ವಿಕೆಟ್ ಗಳಿಸಿದರೆ, ಆರ್ಷ್ ದೀಪ್ ಸಿಂಗ್ 17 ರನ್ ನೀಡಿ 2 ವಿಕೆಟ್ ಗಳಿಸಿದರು, ಹಾರ್ದಿಕ್ ಪಾಂಡ್ಯ 42 ರನ್ ಗಳನ್ನು ನೀಡಿ 2 ವಿಕೆಟ್, ಅಕ್ಷರ್ ಪಟೇಲ್ 22 ರನ್ ನೀಡಿ 2 ವಿಕೆಟ್ ಗಳಿಸಿದರು.
ಇಂಗ್ಲೆಂಡ್ ನೀಡಿದ 132 ರನ್ ಗುರಿ ಬೆನ್ನಟ್ಟಿದ ಭಾರತ 12.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿ ಜಯ ತನ್ನದಾಗಿಸಿಕೊಂಡಿತ್ತು.
ಭಾರತ ಈ ಗೆಲುವಿನ ಮೂಲಕ ಟೂರ್ನಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Advertisement