
ಪುಣೆ: ಪುಣೆಯಲ್ಲಿ ಶುಕ್ರವಾರ ನಡೆದ ಭಾರತ-ಇಂಗ್ಲೆಂಡ್ ನಡುವಿನ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಂಗ್ಲರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ ವಶಪಡಿಸಿಕೊಂಡಿದೆ.
ಟಾಸ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭದಲ್ಲಿ ಆಘಾತ ಎದುರಿಸಿತು. ಆರಂಭಿಕ ಬ್ಯಾಟರ್ ಸಂಜು ಸಾಮ್ಸನ್, ತಿಲಕರ್ ವರ್ಮಾ, ನಾಯಕ ಸೂರ್ಯಕುಮಾರ್ ಯಾದವ್, ಅಭಿಷೇಕ್ ಶರ್ಮಾ ಹಾಗೂ ರಿಂಕು ಸಿಂಗ್ ನಿರಾಸೆ ಮೂಡಿಸಿದರು. ನಂತರ ಆರನೇ ವಿಕೆಟ್ ಗೆ ಜೊತೆಯಾದ ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಅವರ ಅರ್ಧ ಶತಕಗಳ ನೆರವಿನಿಂದ ಭಾರತ ನಿಗದತಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 181 ರನ್ ಗಳ ಬೃಹತ್ ಮೊತ್ತ ಸೇರಿಸಿತು.
ಗೆಲುವಿಗೆ 182 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಇಂಗ್ಲೆಂಡ್, ಬೆನ್ ಡಕ್ಕೆಟ್(39) ಹಾಗೂ ಹ್ಯಾರಿ ಬ್ರೂಕರ್ ಅವರ ಆಕರ್ಷಕ ಅರ್ಧ ಶತಕ(51)ದ ಹೊರತಾಗಿಯೂ 19.4 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 166 ರನ್ ಮಾತ್ರ ಗಳಿಸಿ ಸೋಲೊಪ್ಪಿಕೊಂಡಿತು. ಇದರೊಂದಿಗೆ ಸರಣಿಯಲ್ಲಿ ಭಾರತ 3-1 ಮುನ್ನಡೆ ಸಾಧಿಸಿದೆ.
ಇಂಗ್ಲೆಂಡ್ ಪರ ಸಕೀಬ್ ಮಹಮೂದ್ ಮೂರು ವಿಕೆಟ್ ಪಡೆದು ಅಬ್ಬರಿಸಿದರು.
Advertisement