
ಟೀಂ ಇಂಡಿಯಾದ ಯುವ ನಾಯಕ ಶುಭ್ಮನ್ ಗಿಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ಶುಭ್ಮನ್ ಗಿಲ್ ಅವರ ಚೊಚ್ಚಲ ಟೆಸ್ಟ್ ದ್ವಿಶತಕ ಇದಾಗಿದೆ. ಇನ್ನು ದ್ವಿಶತಕ ಮೂಲಕ ಆಂಗ್ಲರ ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ನಾಯಕ ಹಾಗೂ ಏಷ್ಯಾದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂಗ್ಲೆಂಡ್ ನೆಲದಲ್ಲಿ ಭಾರತೀಯ ಟೆಸ್ಟ್ ನಾಯಕನೊಬ್ಬ ದ್ವಿಶತಕ ಗಳಿಸಿದ್ದು ಇದೇ ಮೊದಲು. ಗಿಲ್ ಗಿಂತ ಮೊದಲು, ಯಾವುದೇ ಭಾರತೀಯ ಟೆಸ್ಟ್ ನಾಯಕ ಇಂಗ್ಲೆಂಡ್‌ನಲ್ಲಿ ದ್ವಿಶತಕ ಗಳಿಸಲು ಸಾಧ್ಯವಾಗಲಿಲ್ಲ. ಅವರಿಗಿಂತ ಮೊದಲು, ಮೊಹಮ್ಮದ್ ಅಜರುದ್ದೀನ್ 1990 ರಲ್ಲಿ ಇಂಗ್ಲೆಂಡ್‌ನಲ್ಲಿ 179 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಆದರೆ ಈಗ ಗಿಲ್ ಅವರ ದಾಖಲೆಯನ್ನು ಮುರಿದು ಮುಂದೆ ಸಾಗಿದ್ದಾರೆ.
ಶುಬ್‌ಮನ್ ಗಿಲ್ ವಿದೇಶಿ ನೆಲದಲ್ಲಿ ಅತಿದೊಡ್ಡ ಟೆಸ್ಟ್ ಇನ್ನಿಂಗ್ಸ್ ಆಡಿದ ಭಾರತೀಯ ನಾಯಕರಾಗಿದ್ದಾರೆ. ಗಿಲ್‌ಗಿಂತ ಮೊದಲು, ವಿದೇಶದಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕೊಹ್ಲಿ 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅವರ ತವರು ನೆಲದಲ್ಲಿ 200 ರನ್‌ಗಳ ಇನ್ನಿಂಗ್ಸ್ ಆಡಿದ್ದರು.
Advertisement