
ಎಡ್ಜ್ ಬ್ಯಾಸ್ಟನ್: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯ ನಿರ್ಣಾಯಕ ಹಂತ ತಲುಪಿರುವಂತೆಯೇ ಐದನೇ ದಿನದಾಟಕ್ಕೆ ಮಳೆರಾಯ ಅಡ್ಡಿಪಡಿಸಿದ್ದಾನೆ.
ಬರ್ಮಿಂಗ್ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 5ನೇ ದಿನದಾಟಕ್ಕೆ ಮಳೆ ಅಡ್ಡಿಯಾಗಿದೆ. ಭಾರತ ನೀಡಿರುವ 608 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಇಂಗ್ಲೆಂಡ್ ತಂಡ 4ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 72 ರನ್ ಕಲೆಹಾಕಿದೆ.
ಇಂಗ್ಲೆಂಡ್ ಗೆಲುವಿಗೆ ಇನ್ನೂ 536 ರನ್ ಗಳ ಅಗತ್ಯವಿದೆ. ಟೆಸ್ಟ್ ಪಂದ್ಯದ ಅಂತಿಮ ದಿನವಾದ ಇಂದು ಇಂಗ್ಲೆಂಡ್ ಈ ಮೊತ್ತವನ್ನು ತಲುಪಬೇಕಿದೆ.
ಅಂತೆಯೇ ಭಾರತಕ್ಕೆ ಈ ಪಂದ್ಯವನ್ನು ಗೆಲ್ಲುವ ಹೆಚ್ಚು ಅವಕಾಶಗಳಿದ್ದು, ಭಾರತ 7 ವಿಕೆಟ್ ಕಬಳಿಸಿದರೆ ಈ ಪಂದ್ಯವನ್ನು ಗೆಲ್ಲಲಿದೆ.
ಆ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಲಿದೆ. ಆದರೆ ಇಂದು ಬೆಳಗ್ಗೆಯಿಂದಲೇ ಬರ್ಮಿಂಗ್ ಹ್ಯಾಮ್ ನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಪಂದ್ಯ ವಿಳಂಬವಾಗುವ ಸಾಧ್ಯತೆಯಿದೆ, ಇದು ಇಂಗ್ಲೆಂಡ್‌ಗೆ ಅನುಕೂಲವಾಗಬಹುದು.
ಹವಾಮಾನ ವರದಿಯ ಪ್ರಕಾರ ಬೆಳಿಗ್ಗೆ ಮತ್ತು ಮಧ್ಯಾಹ್ನ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೊದಲ ಸೆಷನ್‌ನ ಆಟದ ಮೇಲೆ ಪರಿಣಾಮ ಬೀರಿದೆ. ಟ
ಆದ್ದರಿಂದ ಆಟ ನಿಗದಿತ ಸಮಯದಲ್ಲಿ ಪ್ರಾರಂಭವಾಗಿಲ್ಲ. ಇದರಿಂದ ಇಂಗ್ಲೆಂಡ್ ತಂಡಕ್ಕೆ ಪ್ರಯೋಜನವಾಗಿದ್ದು, ಆತಿಥೇಯ ಆಂಗ್ಲರಿಗೆ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ನೆರವಾಗಲಿದೆ.
Advertisement