
ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್‌ನಲ್ಲಿ ಶುಭಮನ್ ಗಿಲ್ ತಮ್ಮ ಮ್ಯಾಜಿಕ್ ಅನ್ನು ಮುಂದುವರೆಸಿದರು. ಮೊದಲ ಇನಿಂಗ್ಸ್‌ನಲ್ಲಿ 269 ರನ್ ಗಳಿಸಿದ ನಂತರ, ಗಿಲ್ ಎರಡನೇ ಇನಿಂಗ್ಸ್‌ನಲ್ಲಿ 161 ರನ್ ಗಳಿಸಿ ಭಾರತ ಉತ್ತಮ ರನ್ ಕಲೆಹಾಕುವಲ್ಲಿ ನೆರವಾದರು. ಪ್ರವಾಸಿ ತಂಡವು ಇಂಗ್ಲೆಂಡ್ ತಂಡಕ್ಕೆ 608 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.
ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಗಿಲ್ ಅನೇಕ ದಾಖಲೆಗಳನ್ನು ಮುರಿದರು. ಅವುಗಳಲ್ಲಿ ಒಂದು 148 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಗಿಲ್ ದಾಖಲೆ ಮಾಡಿದ್ದಾರೆ. ಗಿಲ್ ಟೆಸ್ಟ್ ಪಂದ್ಯವೊಂದರಲ್ಲಿ ದ್ವಿಶತಕ ಮತ್ತು 150 ರನ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.
ಮೊದಲ ಇನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಬೌಲಿಂಗ್‌ನಲ್ಲಿ ಮತ್ತೊಮ್ಮೆ ಮಿಂಚಿದರು. ನಾಲ್ಕನೇ ದಿನದ ಚಹಾ ವಿರಾಮದ ನಂತರ ಗಿಲ್ ಭಾರತದ ಎರಡನೇ ಇನಿಂಗ್ಸ್ ಅನ್ನು ಆರು ವಿಕೆಟ್ ನಷ್ಟಕ್ಕೆ 427ಕ್ಕೆ ಡಿಕ್ಲೇರ್ ಮಾಡಿಕೊಂಡರು. ಈ ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಲು ಇಂಗ್ಲೆಂಡ್‌ಗೆ 608 ರನ್‌ಗಳ ಅಗತ್ಯವಿದೆ.
ಟೆಸ್ಟ್ ಕ್ರಿಕೆಟ್‌ನ 148 ವರ್ಷಗಳ ಇತಿಹಾಸದಲ್ಲಿ, ಯಾವುದೇ ತಂಡವು ಪಂದ್ಯದ ನಾಲ್ಕನೇ ಇನಿಂಗ್ಸ್‌ನಲ್ಲಿ ಗೆಲ್ಲಲು 418 ರನ್‌ಗಳಿಗಿಂತ ದೊಡ್ಡ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿಯೇ ಇಲ್ಲ. 2003ರಲ್ಲಿ ಆಂಟಿಗುವಾದ ಸೇಂಟ್ ಜಾನ್ಸ್‌ನಲ್ಲಿ ಆಸ್ಟ್ರೇಲಿಯಾ ಸೋಲಿಸಲು 418 ರನ್ ಗಳಿಸಿದ ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಧಿಕ ಯಶಸ್ವಿಯಾಗಿ ಚೇಸ್ ಮಾಡಿದ ದಾಖಲೆ ಹೊಂದಿದೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್‌ನ ಅತ್ಯಧಿಕ ಯಶಸ್ವಿ ರನ್ ಚೇಸ್ 378 ಆಗಿದೆ. ಅವರು ಮೂರು ವರ್ಷಗಳ ಹಿಂದೆ (2022) ಎಡ್ಜ್‌ಬಾಸ್ಟನ್‌ನಲ್ಲಿ ಭಾರತದ ವಿರುದ್ಧ ಜಯ ಸಾಧಿಸಿದ್ದರು. ಆದರೆ, ಬರ್ಮಿಂಗ್‌ಹ್ಯಾಮ್‌ನಲ್ಲಿ ಶನಿವಾರದ ಮುಕ್ತಾಯದ ವೇಳೆಗೆ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿತ್ತು. ಇಂಗ್ಲೆಂಡ್ ತಂಡಕ್ಕೆ ಭಾರತದ ವಿರುದ್ಧ ಎರಡನೇ ಟೆಸ್ಟ್ ಗೆಲ್ಲಲು ಇನ್ನೂ 536 ರನ್‌ಗಳ ಅಗತ್ಯವಿದೆ.
ಮೊದಲ ಇನಿಂಗ್ಸ್‌ನಲ್ಲಿ ಭಾರತ 587 ರನ್ ಗಳಿಸಿತ್ತು. ನಂತರ ಇಂಗ್ಲೆಂಡ್ 407 ರನ್ ಗಳಿಸಲಷ್ಟೇ ಶಕ್ತವಾಯಿತು. ಬಳಿಕ ಭಾರತ 158 ರನ್‌ಗಳ ಮುನ್ನಡೆ ಸಾಧಿಸಿತು. ಭಾರತ ಎರಡನೇ ಇನಿಂಗ್ಸ್‌ನಲ್ಲಿ 427 ರನ್ ಗಳಿಸಿತು. ಆ ಮೂಲಕ ಇಂಗ್ಲೆಂಡ್ ವಿರುದ್ಧ 607 ರನ್‌ಗಳ ಮುನ್ನಡೆ ಸಾಧಿಸಿತು. ಇದೀಗ ಇಂಗ್ಲೆಂಡ್ ಗೆಲ್ಲಲು 608 ರನ್ ಗಳಿಸಬೇಕಿದೆ.
ಮೊದಲ ಇನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 70 ರನ್ ಗಳಿಸಿ 6 ವಿಕೆಟ್ ಪಡೆದು ಮಿಂಚಿದರು. ವಿಶ್ವದ ನಂಬರ್ ಒನ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಆಕಾಶ್ ದೀಪ್ ಕೂಡ ಉತ್ತಮ ಪ್ರದರ್ಶನ ನೀಡಿದರು. 88 ರನ್ ನೀಡಿ 4 ವಿಕೆಟ್ ಪಡೆದು ತಂಡಕ್ಕೆ ನೆರವಾದರು.
Advertisement