England-India Test Series: ಎಡ್ಜ್‌ಬಾಸ್ಟನ್‌ನಲ್ಲಿ ದಾಖಲೆ; ನಾಯಕ ಶುಭಮನ್ ಗಿಲ್‌ರನ್ನು ಶ್ಲಾಘಿಸಿದ ವಿರಾಟ್ ಕೊಹ್ಲಿ!

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ ಕೊಹ್ಲಿ ಸಾರ್ವಜನಿಕ ಜೀವನದಿಂದ ದೂರ ಉಳಿದಿದ್ದಾರೆ.
Shubman Gill - Virat Kohli
ಶುಭಮನ್ ಗಿಲ್ - ವಿರಾಟ್ ಕೊಹ್ಲಿ
Updated on

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ದಾಖಲೆಯ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ಶುಭಮನ್ ಗಿಲ್ ಅವರನ್ನು ಹೊಗಳಿದ್ದಾರೆ. ಗಿಲ್ ಒಂದು ಟೆಸ್ಟ್‌ ಪಂದ್ಯದಲ್ಲಿ ದ್ವಿಶತಕ ಮತ್ತು 150 ರನ್ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡರು. ಟೆಸ್ಟ್ ಪಂದ್ಯವೊಂದರಲ್ಲಿ 430 ರನ್ ಕಲೆಹಾಕಿದ್ದು, ಎರಡನೇ ಅತಿ ಹೆಚ್ಚು ರನ್ ಆಗಿದೆ. ಗ್ರಹಾಂ ಗೂಚ್ ಮೊದಲ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದ 4ನೇ ಕ್ರಮಾಂಕದಲ್ಲಿ ಶುಭಮನ್ ಗಿಲ್ ಬ್ಯಾಟಿಂಗ್ ಮಾಡುತ್ತಿದ್ದು, ನಾಯಕನಾಗಿ ತಮ್ಮ ಮೊದಲ ಎರಡು ಟೆಸ್ಟ್‌ಗಳಲ್ಲಿ ಮೂರು ಶತಕಗಳನ್ನು ಗಳಿಸಿದ ಎರಡನೇ ನಾಯಕನಾಗಿ ಗಿಲ್ ವಿರಾಟ್ ಕೊಹ್ಲಿ ಅವರ ಸಾಲಿಗೆ ಸೇರಿದ್ದಾರೆ. 25 ವರ್ಷದ ಗಿಲ್ ಭಾರತ ಮತ್ತು ಇಂಗ್ಲೆಂಡ್ ಸರಣಿಯಲ್ಲಿ ನಿಯಮಿತವಾಗಿ ದಾಖಲೆಗಳನ್ನು ಮುರಿದಿದ್ದಾರೆ.

'ಚೆನ್ನಾಗಿ ಆಡಿದೆ ಸ್ಟಾರ್ ಬಾಯ್. ಅಪರೂಪದ ದಾಖಲೆ ಬರೆಯುತ್ತಿರುವಿರಿ. ಇಲ್ಲಿಂದ ಮುಂದೆ ಇನ್ನೂ ಹೆಚ್ಚಿನ ಎತ್ತರ ತಲುಪಿ. ನೀವು ಇದಕ್ಕೆಲ್ಲ ಅರ್ಹರು' ಎಂದು ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಬರೆದಿದ್ದಾರೆ.

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ ಕೊಹ್ಲಿ ಸಾರ್ವಜನಿಕ ಜೀವನದಿಂದ ದೂರ ಉಳಿದಿದ್ದಾರೆ. 36 ವರ್ಷದ ಅವರು ಮೇ ತಿಂಗಳಲ್ಲಿ ನಿವೃತ್ತಿ ಘೋಷಿಸಿದಾಗಿನಿಂದಲೂ ಸಾಮಾಜಿಕ ಮಾಧ್ಯಮದಲ್ಲಿ ನಿಷ್ಕ್ರಿಯರಾಗಿದ್ದರು. ಆದಾಗ್ಯೂ, ಗಿಲ್ ಅವರ ದಾಖಲೆಯ ಬ್ಯಾಟಿಂಗ್ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಶುಭಮನ್ ಗಿಲ್ ಮೊದಲ ಇನಿಂಗ್ಸ್‌ನಲ್ಲಿ 269 ರನ್ ಗಳಿಸಿದರು ಮತ್ತು ಎರಡನೇ ಇನಿಂಗ್ಸ್‌ನಲ್ಲಿ 161 ರನ್ ಗಳಿಸಿದರು. 25 ವರ್ಷದ ಅವರು 1ನೇ ಟೆಸ್ಟ್‌ನಲ್ಲಿ 147 ರನ್ ಗಳಿಸಿದ್ದರು. ಅವರು ಸರಣಿಯಲ್ಲಿ 585 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com