Cricket: ಶ್ರೀಲಂಕಾ ವಿರುದ್ಧ ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ; Harbhajan Singh ದಾಖಲೆ ಮುರಿದ Mahedi Hasan

ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಐತಿಹಾಸಿಕ ಜಯ ಸಾಧಿಸಿದೆ.
Bangladesh Clinch T20I Series vs Sri Lanka
ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶಕ್ಕೆ ಐತಿಹಾಸಿಕ ಜಯ
Updated on

ಕೊಲಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಐತಿಹಾಸಿಕ ಜಯ ಸಾಧಿಸಿದ್ದು, ತಂಡದ ಸ್ಟಾರ್ ಬೌಲರ್ ಮೆಹದಿ ಹಸನ್ ಭಾರತದ ಸ್ಪಿನ್ ಲೆಜೆಂಡ್ ಹರ್ಭಜನ್ ಸಿಂಗ್ ದಾಖಲೆ ಮುರಿದಿದ್ದಾರೆ.

ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಐತಿಹಾಸಿಕ ಜಯ ಸಾಧಿಸಿದೆ. ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡ 8 ವಿಕೆಟ್ ಗಳ ಅಂತರದ ಭರ್ಜರಿ ಜಯ ಸಾಧಿಸಿದೆ.

ಆರ್​ ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಚರಿತ್ ಅಸಲಂಕಾ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ ನಿಸ್ಸಾಂಕಾ (46 ರನ್) ಮತ್ತು ಶನಕ (35 ರನ್) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು.

ಈ ಸುಲಭದ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ಪರ ತಂಝೀಮ್ ಹಸನ್ ತಮೀಮ್ 47 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ ಅಜೇಯ 73 ರನ್ ಬಾರಿಸಿದರು. ಇನ್ನು ನಾಯಕ ಲಿಟ್ಟನ್ ದಾಸ್ 32 ರನ್ ಕಲೆಹಾಕಿದರು. ಇನ್ನು ತೌಹಿದ್ ಹೃದೋಯ್ 27 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡವು 16.3 ಓವರ್​ಗಳಲ್ಲಿ 133 ರನ್ ಬಾರಿಸಿ, 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

Bangladesh Clinch T20I Series vs Sri Lanka
ICC Rankings: Joe Root ಮತ್ತೆ ನಂಬರ್ 1; Shubhman Gill, Yashaswi jaiswal, Rishab Pant ಇಳಿಕೆ

ಬಾಂಗ್ಲಾದೇಶಕ್ಕೆ ಐತಿಹಾಸಿಕ ಜಯ

ಇನ್ನು ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಬಾಂಗ್ಲಾದೇಶಕ್ಕೆ ಇದು ಚೊಚ್ಚಲ ಸರಣಿ ಜಯವಾಗಿದೆ. ಬಾಂಗ್ಲಾದೇಶ ತಂಡವು ಈವರೆಗೆ ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆದ್ದಿಲ್ಲ. ಈ ಬಾರಿ ಲಂಕಾ ಪಡೆ ವಿರುದ್ಧ 2-1 ಅಂತರದಿಂದ ಸರಣಿ ಗೆಲ್ಲುವ ಮೂಲಕ ಬಾಂಗ್ಲಾದೇಶ್ ತಂಡವು ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದೆ.

ಹರ್ಭಜನ್ ದಾಖಲೆ ಮುರಿದ ಮೆಹದಿ ಹಸನ್

ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಮೆಹದಿ ಹಸನ್ 4 ಓವರ್ ನಲ್ಲಿ ಕೇವಲ 2.80 ಸರಾಸರಿಯಲ್ಲಿ ಕೇವಲ 11ರನ್ ನೀಡಿದ್ದರು. ಈ ಪೈಕಿ ಒಂದು ಮೇಡಿನ್ ಕೂಡ ಸೇರಿತ್ತು. ಇದು ಪ್ರೇಮದಾಸ ಕ್ರೀಡಾಂಗಣದಲ್ಲಿ ಬೌಲರ್ ಒಬ್ಬರ ಟಿ20 ಪಂದ್ಯದ ಅತ್ಯುತ್ತಮ ಪ್ರದರ್ಶನವಾಗಿ ದಾಖಲಾಗಿದೆ.

ಈ ಹಿಂದೆ ಈ ದಾಖಲೆ ಭಾರತದ ಹರ್ಭಜನ್ ಸಿಂಗ್ ಹೆಸರಿನಲ್ಲಿತ್ತು. 2012ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಭಜನ್ ಸಿಂಗ್ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಇದು ಈ ಕ್ರೀಡಾಂಗಣದಲ್ಲಿ ವಿದೇಶಿ ಬೌಲರ್ ಒಬ್ಬರ ಅತ್ಯುತ್ತಮ ಪ್ರದರ್ಶನವಾಗಿತ್ತು. ಇದೀಗ ಈ ದಾಖಲೆಯನ್ನು ಬಾಂಗ್ಲಾದೇಶದ ಮೆಹದಿ ಹಸನ್ ಹಿಂದಿಕ್ಕಿದ್ದಾರೆ.

ಉಳಿದಂತೆ ಈ ಮೈದಾನದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ದಾಖಲೆ ಶ್ರೀಲಂಕಾದ ವನಿಂದು ಹಸರಂಗ ಹೆಸರಲ್ಲಿದೆ. ಅವರು ಕೇವಲ 9 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com