37 ಎಸೆತಗಳಲ್ಲೇ ಶತಕ ಸಿಡಿಸಿದ RCB Star: T20 ಇತಿಹಾಸದ ವೇಗದ ಸೆಂಚುರಿ ಭಾರಿಸಿದ Tim David

37 ಎಸೆತಗಳಲ್ಲೇ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಸ್ಫೋಟಕ ಶತಕದ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ವೇಗದ ಶತಕ ಸಿಡಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
RCB Star Tim David smashes fastest T20I century for Australia
ಟಿಮ್ ಡೇವಿಡ್ ಸ್ಫೋಟಕ ಶತಕ
Updated on

ಸೆಂಟ್ ಕಿಟ್ಸ್: ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ಹಾಗೂ ಆಸ್ಟ್ರೇಲಿಯಾದ ಟಿಮ್ ಡೇವಿಡ್ ಸ್ಫೋಟಕ ಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ.

ವೆಸ್ಟ್ ಇಂಡೀಸ್ ನ ಸೇಂಟ್ ಕಿಟ್ಸ್​ನ ವಾರ್ನರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಿಮ್ ಡೇವಿಡ್ ಸ್ಫೋಟಕ ಶತಕ ಸಿಡಿಸಿದ್ದಾರೆ. 37 ಎಸೆತಗಳಲ್ಲೇ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಸ್ಫೋಟಕ ಶತಕದ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ವೇಗದ ಶತಕ ಸಿಡಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಶಾಯ್ ಹೋಪ್ (102) ಅವರ ಶತಕದ ನೆರವಿನೊಂದಿಗೆ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿದರು. ಪರಿಣಾಮ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಇದರೊಂದಿಗೆ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆ ಟಿಮ್ ಡೇವಿಡ್ ಪಾಲಾಯಿತು.

RCB Star Tim David smashes fastest T20I century for Australia
India vs England, 4th Test: Joe Root ಭರ್ಜರಿ ಬ್ಯಾಟಿಂಗ್; Jacques Kallis, Rahul Dravid ದಾಖಲೆ ಪತನ

ಇದಾದ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ಟಿಮ್ ಡೇವಿಡ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 37 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು. ಈ ಶತಕದೊಂದಿಗೆ ಆಸ್ಟ್ರೇಲಿಯಾ ಪರ ಅತೀ ವೇಗದ ಟಿ20 ಶತಕ ಬಾರಿಸಿದ ದಾಖಲೆ ಟಿಮ್ ಪಾಲಾಯಿತು.

ಇದಕ್ಕೂ ಮುನ್ನ ಈ ದಾಖಲೆ ಜೋಶ್ ಇಂಗ್ಲಿಸ್ ಹೆಸರಿನಲ್ಲಿತ್ತು. 2024 ರಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ ಕೇವಲ 43 ಎಸೆತಗಳಲ್ಲಿ ಶತಕ ಬಾರಿಸಿದ್ದರು.

ಇದೀಗ ಕೇವಲ 37 ಎಸೆತಗಳಲ್ಲಿ ಶತಕ ಬಾರಿಸಿ ಟಿಮ್ ಡೇವಿಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ 16.1 ಓವರ್​ಗಳಲ್ಲಿ 215 ರನ್​ಗಳ ಗುರಿ ಮುಟ್ಟಿಸುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 6 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com