England vs India 5th test: ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆ; ನಿರ್ಣಾಯಕ ಪಂದ್ಯದಿಂದ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಔಟ್!

ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಒಲಿ ಪೋಪ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.
Ben Stokes
ಬೆನ್ ಸ್ಟೋಕ್ಸ್
Updated on

ಲಂಡನ್: ಗುರುವಾರದಿಂದ ಇಲ್ಲಿ ಪ್ರಾರಂಭವಾಗುವ ಭಾರತ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ಗಾಗಿ ಇಂಗ್ಲೆಂಡ್ ತನ್ನ ಪ್ಲೇಯಿಂಗ್ XI ನಲ್ಲಿ ಮೂರು ಬದಲಾವಣೆಗಳನ್ನು ಮಾಡಿದೆ. ಹೀಗಾಗಿ ಗಾಯಗೊಂಡಿರುವ ನಾಯಕ ಬೆನ್ ಸ್ಟೋಕ್ಸ್ ಮತ್ತು ಪ್ರಮುಖ ವೇಗಿ ಜೋಫ್ರಾ ಆರ್ಚರ್ ಪಂದ್ಯದಿಂದ ಹೊರಗುಳಿದಿದ್ದಾರೆ.

ನಾಲ್ಕು ಟೆಸ್ಟ್ ಪಂದ್ಯಗಳ ನಂತರ ಆತಿಥೇಯರು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದಾರೆ. ಇದೀಗ ಸರಣಿ ಯಾರ ಪಾಲಾಗಲಿದೆ ಎಂದು ನಿರ್ಧರಿಸುವ ಪಂದ್ಯದಲ್ಲಿ ಇಂಗ್ಲೆಂಡ್ ತಂಡದಲ್ಲಿ ಮೂರು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.

ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಒಲಿ ಪೋಪ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.

ಬ್ಯಾಟಿಂಗ್‌ನಲ್ಲೂ ಮಿಂಚಿದ್ದ ಸ್ಟೋಕ್ಸ್, 17 ವಿಕೆಟ್‌ಗಳನ್ನು ಪಡೆದು ತಂಡದ ಗೆಲುವಿಗೆ ನೆರವಾಗಿದ್ದರು. ಆದರೆ, ಭುಜದ ಗಾಯದಿಂದಾಗಿ ಓವಲ್‌ನಲ್ಲಿ ನಡೆಯಲಿರುವ ಪಂದ್ಯದಿಂದ ಹೊರಗುಳಿದಿದ್ದಾರೆ. ನಾಲ್ಕು ವರ್ಷಗಳ ಸುದೀರ್ಘ ಅಂತರದ ನಂತರ ಟೆಸ್ಟ್ ಕ್ರಿಕೆಟ್‌ಗೆ ಹಿಂದಿರುಗಿದ್ದ ಆರ್ಚರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

'ಕ್ಯಾಪ್ಟನ್ ಬೆನ್ ಸ್ಟೋಕ್ಸ್ ಬಲ ಭುಜದ ಗಾಯದಿಂದಾಗಿ ಅಲಭ್ಯರಾಗಿದ್ದಾರೆ. ಸ್ಪಿನ್ನರ್ ಲಿಯಾಮ್ ಡಾಸನ್ ಮತ್ತು ವೇಗದ ಬೌಲರ್‌ಗಳಾದ ಜೋಫ್ರಾ ಆರ್ಚರ್ ಮತ್ತು ಬ್ರೈಡನ್ ಕಾರ್ಸ್ ಕೂಡ ಹೊರಗುಳಿದಿದ್ದಾರೆ' ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಬುಧವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಜೇಕಬ್ ಬೆಥೆಲ್ ಅವರನ್ನು ಇಂಗ್ಲೆಂಡ್ ತಂಡಕ್ಕೆ ಸೇರಿಸಿಕೊಂಡಿದ್ದು, ಬೌಲರ್‌ಗಳಾದ ಗಸ್ ಅಟ್ಕಿನ್ಸನ್, ಜೇಮೀ ಓವರ್‌ಟನ್ ಮತ್ತು ಜೋಶ್ ಟಂಗ್ ತಂಡವನ್ನು ಸೇರಿಕೊಂಡಿದ್ದಾರೆ' ಎಂದು ಇಸಿಬಿ ಹೇಳಿದೆ.

ಇಂಗ್ಲೆಂಡ್ ಪ್ಲೇಯಿಂಗ್ XI

ಝಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್, ಜೇಕಬ್ ಬೆಥೆಲ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್, ಜೋಶ್ ಟಂಗ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com