
ಅಹ್ಮದಾಬಾದ್: ಹಾಲಿ ಐಪಿಎಲ್ ಟೂರ್ನಿಯ ಇಂದು ನಡೆದ Qualifier 2 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಇತಿಹಾಸದ ಕಳಪೆ ದಾಖಲೆ ನಿರ್ಮಿಸಿದೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ Qualifier 2 ಪಂದ್ಯದಲ್ಲಿ ಮುಂಬೈ ನೀಡಿದ್ದ 204 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ 19 ಓವರ್ ನಲ್ಲೇ 5 ವಿಕೆಟ್ ಕಳೆದುಕೊಂಡು 207 ರನ್ ಗಳಿಸಿ 5 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತು.
ಆ ಮೂಲಕ ಹಾಲಿ ಐಪಿಎಲ್ ಟೂರ್ನಿಯ ಫೈನಲ್ ಹಂತಕ್ಕೆ ಪ್ರವೇಶ ಪಡೆಯಿತು. ಆ ಮೂಲಕ ಮುಂಬೈ ತಂಡ ಪ್ರಶಸ್ತಿ ರೇಸ್ ನಿಂದ ಹೊರಬಿದ್ದಿದೆ.
ಮೋದಿ ಕ್ರೀಡಾಂಗಣದಲ್ಲಿ ಕಳಪೆ ದಾಖಲೆ
ಇನ್ನು ಇಂದಿನ ಪಂದ್ಯದ ಸೋಲಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸತತ 6ನೇ ಪಂದ್ಯ ಸೋತ ಹೀನಾಯ ದಾಖಲೆಗೆ ಪಾತ್ರವಾಗಿದೆ. ಈ ಕ್ರೀಡಾಂಗಣದಲ್ಲಿ ಮುಂಬೈ ತಂಡ ಕೊನೆಯ ಬಾರಿಗೆ ಐಪಿಎಲ್ ಪಂದ್ಯ ಗೆದ್ದಿದ್ದು 2014ರಲ್ಲಿ ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧ.. ಈ ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್ ತಂಡ ಇಲ್ಲಿ ಆಡಿರುವ ತನ್ನಕೊನೆಯ ಆರು ಪಂದ್ಯಗಳನ್ನು ಸತತವಾಗಿ ಸೋತಿದೆ.
SIxth consecutive defeat for Mumbai Indians in Ahmedabad. Their only win here came against RR in 2014.
Shreyas Iyer ಅಪರೂಪದ ದಾಖಲೆ
ಇನ್ನು ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಗೆಲ್ಲಿಸಿ ಫೈನಲ್ ಕರೆದೊಯ್ಯುವ ಮೂಲಕ ಆ ತಂಡದ ನಾಯಕ ಶ್ರೇಯಸ್ ಅಯ್ಯರ್ ಅತ್ಯಪರೂಪದ ದಾಖಲೆ ನಿರ್ಮಿಸಿದ್ದಾರೆ. ಶ್ರೇಯಸ್ ಅಯ್ಯರ್ ಈಗ ಮೂರು ವಿಭಿನ್ನ ತಂಡಗಳನ್ನು ಐಪಿಎಲ್ ಫೈನಲ್‌ಗೆ ಮುನ್ನಡೆಸಿದ ಮೊದಲ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಅವರು 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್, 2024 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು 2025ರಲ್ಲಿ ಪಂಜಾಬ್ ಕಿಂಗ್ಸ್ ತಂಡಗಳನ್ನು ನಾಯಕರಾಗಿ ಪ್ರತಿನಿಧಿಸಿದ್ದು ಮಾತ್ರವಲ್ಲದೇ ಫೈನಲ್ ಗೆ ಕರೆದೊಯ್ದಿದ್ದರು. ಐಪಿಎಲ್ ಇತಿಹಾಸದಲ್ಲಿ ಬೇರೆ ಯಾವುದೇ ಆಟಗಾರನು ಒಂದಕ್ಕಿಂತ ಹೆಚ್ಚು ತಂಡಗಳಿಗೆ ಇಂತಹ ಸಾಧನೆ ಮಾಡಿಲ್ಲ.
Advertisement