
ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಪಂಜಾಬ್ ಕಿಂಗ್ಸ್ (PBKS) ಮತ್ತು ಮುಂಬೈ ಇಂಡಿಯ್ಸ್ (MI) ನಡುವೆ ಕ್ವಾಲಿಫೈಯರ್ 2 ಪಂದ್ಯ ನಡೆಯಲಿದ್ದು, ವಿಜೇತ ತಂಡ ಜೂನ್ 3ರಂದು ನಡೆಯಲಿರುವ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಸೆಣಸಲಿದೆ. ಈ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಇದೀಗ ಸಿಹಿಸುದ್ದಿ ಲಭ್ಯವಾಗಿದೆ. ಗಾಯದಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಹೊರಗುಳಿದಿದ್ದ ಪಿಬಿಕೆಎಸ್ ಲೆಗ್-ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಎಂಐ ವಿರುದ್ಧದ ಪಂದ್ಯದಲ್ಲಿ ಆಟಲಿದ್ದಾರೆ.
ರೆವ್‌ಸ್ಪೋರ್ಟ್ಜ್‌ನಲ್ಲಿನ ವರದಿ ಪ್ರಕಾರ, ಯುಜ್ವೇಂದ್ರ ಚಾಹಲ್ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಆಡಲಿದ್ದಾರೆ.
ಮತ್ತೊಂದೆಡೆ, ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದ ದೀಪಕ್ ಚಾಹರ್ ಕೂಡ ತಂಡಕ್ಕೆ ಮರಳುವ ಸಾಧ್ಯತೆ ಇದೆ. ವರದಿ ಪ್ರಕಾರ, ವೇಗಿ ಸಹಾಯಕ ಸಿಬ್ಬಂದಿ ಮತ್ತು ಕೋಚ್ ಮಹೇಲ ಜಯವರ್ಧನೆ ಅವರೊಂದಿಗೆ ಕೆಲವು ಫಿಟ್ನೆಸ್ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಯುಜ್ವೇಂದ್ರ ಚಾಹಲ್ ಪಂಜಾಬ್ ತಂಡದೊಂದಿಗೆ ಅಭ್ಯಾಸದಲ್ಲಿ ತೊಡಗಿರುವುದು ಕಂಡುಬಂದಿದೆ.
ಪಂದ್ಯಾವಳಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಪಂಜಾಬ್ ಕಿಂಗ್ಸ್ ತಂಡವು ಕ್ವಾಲಿಫೈಯರ್ 1ರಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿತ್ತು. ಇದೀಗ ಫೈನಲ್ ತಲುಪಲು ಕ್ವಾಲಿಫೈಯರ್ 2ನಲ್ಲಿ ಗೆದ್ದೇ ಗೆಲ್ಲುವ ಅನಿವಾರ್ಯತೆ ಇದೆ. ಪಂಜಾಬ್ ಪರವಾಗಿ ದೀಪಕ್ ಚಾಹರ್ 14 ಪಂದ್ಯಗಳಲ್ಲಿ 9.17 ಎಕಾನಮಿಯಲ್ಲಿ 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಯುಜ್ವೇಂದ್ರ ಚಾಹಲ್ 12 ಪಂದ್ಯಗಳಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
ಮೇ 26 ರಂದು ಜೈಪುರದಲ್ಲಿ ನಡೆದ ಲೀಗ್ ಹಂತದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಮುಖಾಮುಖಿಯಲ್ಲಿ ಪಂಜಾಬ್ ತಂಡ 7 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕ ವ್ಯರ್ಥವಾಯಿತು.
Advertisement