
ಐಪಿಎಲ್ 2025ರ ಕ್ವಾಲಿಫೈಯರ್ 2 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಮತ್ತು ಮುಂಬೈ ಇಂಡಿಯನ್ಸ್ (MI) ಮುಖಾಮುಖಿಯಾಗಲಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ ಪಂದ್ಯ ಆರಂಭಕ್ಕೂ ಮುನ್ನವೇ ಮಳೆ ಆರಂಭವಾಗಿದ್ದರಿಂದ ಪಂದ್ಯಕ್ಕೆ ಅಡ್ಡಿಯಾಗಿದೆ.
ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಕ್ವಾಲಿಫೈಯರ್ 1ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಎಂಟು ವಿಕೆಟ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾಲಿಫೈಯರ್ 2ಗೆ ಆಯ್ಕೆಯಾಗಿತ್ತು. ಕ್ವಾಲಿಫೈಯರ್ 2 ಪಂದ್ಯದಲ್ಲಿ ಗೆಲ್ಲುವ ತಂಡ ಮಂಗಳವಾರ ನಡೆಯಲಿರುವ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
ಅಂಕಪಟ್ಟಿಯಲ್ಲಿ ಪಂಜಾಬ್ ತಂಡ ಅಗ್ರಸ್ಥಾನದಲ್ಲಿದ್ದರೆ ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನದಲ್ಲಿದೆ. ಹೀಗಾಗಿ ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾದರೆ, ಪಿಬಿಕೆಎಸ್ ತಂಡವನ್ನು ವಿಜೇತರೆಂದು ಘೋಷಿಸಲಾಗುತ್ತದೆ. ಹೀಗಾಗಿ ಫೈನಲ್ ಪಂದ್ಯದಲ್ಲಿ ಪಂಜಾಬ್ ಮತ್ತು ಆರ್ ಸಿಬಿ ಮುಖಾಮುಖಿಯಾಗಲಿವೆ. ಈ ಎರಡು ತಂಡಗಳು ತಮ್ಮ ಚೊಚ್ಚಲ ಐಪಿಎಲ್ ಪ್ರಶಸ್ತಿಗಾಗಿ ಸೆಣಸಲಿದೆ.
Advertisement