
ಮೈಸೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸತತ 18 ವರ್ಷಗಳ ಕನಸು ನನಸು ಆಗಲು ಇನ್ನೊಂದು ಹೆಜ್ಜೆ ಮಾತ್ರ ಬಾಕಿಯಿದೆ. ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಆರ್ ಸಿಬಿ ಪ್ರಶಸ್ತಿ ಎತ್ತಿಹಿಡಿಯುವುದು ನಿಶ್ಚಿತ ಎಂಬುದು ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ, ನಂಬಿಕೆಯಾಗಿದೆ.
ನಾಳೆ ನಡೆಯಲಿರುವ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಫೈನಲ್ನಲ್ಲಿ ಆರ್ಸಿಬಿ ಗೆಲುವಿಗಾಗಿ ಕೆಲವು ಕಡೆಗಳಲ್ಲಿ ವಿಶೇಷ ಪೂಜೆ, ಪುನಸ್ಕಾರಗಳು ನಡೆಯುತ್ತಿವೆ. ಈ ಮಧ್ಯೆ ಈ ಬಾರಿ ಆರ್ ಸಿಬಿ ಗೆದ್ದರೆ ಉಚಿತ ಹೋಳಿಗೆ ಊಟ ಹಾಕಿಸಲಾಗುವುದು ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.
ಹೌದು. ಮೈಸೂರಿನ ಆರ್ಸಿಬಿಯ ಅಪ್ಪಟ ಅಭಿಮಾನಿ ಆಗಿರುವ ಬಸವರಾಜ ಬಸಪ್ಪ ಫೈನಲ್ ಪಂದ್ಯಕ್ಕೂ ಒಂದು ದಿನ ಮೊದಲು, ಗನ್ ಹೌಸ್ ವೃತ್ತದಲ್ಲಿರುವ ಇಂದಿರಾ ಕ್ಯಾಂಟೀನ್ನಲ್ಲಿ ಉಚಿತವಾಗಿ ಹೋಳಿಗೆ ಊಟ ಹಾಕಿಸಿದ್ದಾರೆ.
ನಾಳೆ ಫೈನಲ್ನಲ್ಲಿ ಆರ್ಸಿಬಿ ಟ್ರೋಫಿ ಎತ್ತಿ ಹಿಡಿದರೆ ಮೈಸೂರಿನ ಎಲ್ಲಾ 16 ಇಂದಿರಾ ಕ್ಯಾಂಟೀನ್ಗಳಲ್ಲೂ ಉಚಿತ ಹೋಳಿಗೆ ಊಟ ಹಾಕಿಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಳಿ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲೂ ಇದೇ ರೀತಿ ಉಚಿತ ಹೋಳಿಗೆ ಊಟ ಹಾಕಿಸಲಿ. ಗೆದ್ದ ಸಂಭ್ರಮದಲ್ಲಿ ಎಲ್ಲರೂ ಸಿಹಿ ಊಟ ಸವಿಯಲಿ. ಗೆಲುವಿನ ಸಂಭ್ರಮ ಹಂಚಿಕೊಳ್ಳಲಿ ಅಂತ ಬಸವರಾಜ ಬಸಪ್ಪ ಸೇರಿದಂತೆ ಆರ್ಸಿಬಿ ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ.
Advertisement