
ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ (Heinrich Klaasen) ಸೋಮವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
ಹೌದು.. ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ (Heinrich Klaasen) ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ ಮತ್ತೋರ್ವ ಅಂತಾರಾಷ್ಟ್ರೀಯ ಸ್ಟಾರ್ ಕ್ರಿಕೆಟಿಗ ನಿವೃತ್ತಿ ಘೋಷಣೆ ಮಾಡಿದ್ದಾರೆ.
ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ (Heinrich Klaasen) ಸೋಮವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
33 ವರ್ಷದ ಸ್ಟಾರ್ ಕ್ರಿಕೆಟಿಗ ಹೆನ್ರಿಕ್ ಕ್ಲಾಸೆನ್ ಇನ್ಸ್ಟಾಗ್ರಾಮ್ ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದು, ಇನ್ನು ಮುಂದೆ ತಮ್ಮ ಕುಟುಂಬ ಮತ್ತು ಭವಿಷ್ಯದತ್ತ ಗಮನ ಹರಿಸುವುದಾಗಿ ಕ್ಲಾಸೆನ್ ಹೇಳಿದ್ದಾರೆ.
'ಕುಟುಂಬದ ಜೊತೆಗೆ ಸಮಯ ಕಳೆಯುವ ಉದ್ದೇಶದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇದೊಂದು ಅತಿ ಕಷ್ಟದ ನಿರ್ಣಯವಾಗಿದ್ದು, ಬಹಳಷ್ಟು ಯೋಚನೆ ಮಾಡಿದ ನಂತರ ಈ ನಿರ್ಧಾರ ಕೈಗೊಂಡಿದ್ದೇನೆ' ಎಂದು ನಿವೃತ್ತಿ ಘೋಷಿಸುವಾಗ ಕ್ಲಾಸೆನ್ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾವನ್ನು ಪ್ರತಿನಿಧಿಸುವುದು ತಮಗೆ ಸಿಕ್ಕಿರುವ ದೊಡ್ಡ ಗೌರವ ಎಂದು ಹೆನ್ರಿಕ್ ಕ್ಲಾಸೆನ್ ಹೇಳಿದರು. ಇದು ಅವರ ಬಾಲ್ಯದ ಕನಸು ಎಂದು ಕ್ಲಾಸೆನ್ ಹೇಳಿದರು. ಅವರು ತಮ್ಮ ತಂಡದ ಸದಸ್ಯರು ಮತ್ತು ವರ್ಷಗಳಲ್ಲಿ ಅವರನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.
'ಇದು ನನಗೆ ತುಂಬಾ ದುಃಖದ ದಿನ ಏಕೆಂದರೆ ನಾನು ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಭವಿಷ್ಯದಲ್ಲಿ ನನಗೆ ಮತ್ತು ನನ್ನ ಕುಟುಂಬಕ್ಕೆ ಯಾವುದು ಉತ್ತಮ ಎಂದು ನಿರ್ಧರಿಸಲು ನನಗೆ ಬಹಳ ಸಮಯ ಹಿಡಿಯಿತು. ಇದು ನಿಜವಾಗಿಯೂ ಕಷ್ಟಕರವಾದ ನಿರ್ಧಾರವಾಗಿತ್ತು, ಆದರೆ ನಾನು ಸಂಪೂರ್ಣವಾಗಿ ಶಾಂತವಾಗಿದ್ದೇನೆ' ಎಂದು ಹೇಳಿದರು.
ಬಲಗೈ ಬ್ಯಾಟರ್ ಕ್ಲಾಸೆನ್ ಅವರು 2018ರಲ್ಲಿ ದಕ್ಷಿಣ ಆಫ್ರಿಕಾ ತಂಡದ ಪರ ಪದಾರ್ಪಣೆ ಮಾಡಿದ್ದರು. ಸ್ಪೋಟಕ ಬ್ಯಾಟಿಂಗ್ ಮೂಲಕ ಹೆಸರಾಗಿದ್ದ 33 ವರ್ಷದ ಕ್ಲಾಸೆನ್ ಅವರು ಏಕದಿನ ಕ್ರಿಕೆಟ್‌ನಲ್ಲಿ 60 ಪಂದ್ಯಗಳಿಂದ 2,141 ರನ್ ಹಾಗೂ 58 ಅಂತರರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ 141.8 ಸ್ರ್ಟೈಕ್ ರೇಟ್‌ನಲ್ಲಿ ಸಾವಿರ ರನ್ ಗಳಿಸಿದ್ದಾರೆ.
ಕ್ಲಾಸೆನ್ ಅವರು ಅಂತರರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಿದ್ದರು. ನ್ಯೂಜಿಲೆಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಕೊನೆಯ ಬಾರಿ ಏಕದಿನ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿದ್ದರು.
ಐಪಿಎಲ್ ನಲ್ಲಿ ಕ್ಲಾಸೆನ್
ಇನ್ನು ಐಪಿಎಲ್‌ನ 18ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಕ್ಲಾಸೆನ್, ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಕೇವಲ 37 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದರು. 2024ರಲ್ಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಕ್ಲಾಸೆನ್, ಇದೀಗ ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರೂ, ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವ ಸಾಧ್ಯತೆಯಿದೆ.
Advertisement