
ನವದೆಹಲಿ: ಭಾನುವಾರ ಅಲಹಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್ ಫೈನಲ್ ಗೆ ಲಗ್ಗೆ ಇಟ್ಟಿದೆ.
ಆದರೆ, ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ನಿಧಾನಗತಿಯ ಓವರ್ ರೇಟ್ ಅನ್ನು ಕಾಯ್ದುಕೊಂಡ ಕಾರಣ ಬಿಸಿಸಿಐ ರೂ. 24 ಲಕ್ಷ ದಂಡ ವಿಧಿಸಿದೆ.
ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆಯಿಂದಾಗಿ ಶ್ರೇಯಸ್ ಅಯ್ಯರ್ ಈ ದಂಡ ವಿಧಿಸಲಾಗಿದೆ. ಅಲ್ಲದೇ ಇಂಪ್ಯಾಕ್ಟ್ ಆಟಗಾರರು ಸೇರಿದಂತೆ ಪ್ಲೇಯಿಂಗ್ XIನ ಉಳಿದ ಆಟಗಾರರಿಗೆ ರೂ. 6 ಲಕ್ಷ ಅಥವಾ ಪಂದ್ಯದ ಶುಲ್ಕದ ಶೇ. 25 ರಷ್ಟು ಸಂಭಾವನೆಯನ್ನು ಕಡಿತ ಮಾಡಲಾಗಿದೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಅದೇ ರೀತಿಯ ಶಿಕ್ಷೆ ಅನುಭವಿಸಿದ್ದಾರೆ. ಅವರಿಗೆ ರೂ. 30 ಲಕ್ಷ ದಂಡ ವಿಧಿಸಲಾಗಿದೆ. ಮುಂಬೈ ಇಂಡಿಯನ್ಸ್ XIನ ಉಳಿದ ಆಟಗಾರರಿಗೆ ರೂ. 12 ಲಕ್ಷ ಅಥವಾ ಪಂದ್ಯದ ಸಂಭಾವನೆಯ ಶೇಕಡಾ 50 ರಷ್ಟು ದಂಡ ವಿಧಿಸಲಾಗಿದೆ.
ಶ್ರೇಯಸ್ ಅಯ್ಯರ್ ಅವರ ಭರ್ಜರಿ ಅಜೇಯ 87 ರನ್ ಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಐದು ವಿಕೆಟ್ ಗಳಿಂದ ಸೋಲಿಸಿದ ಪಂಜಾಬ್ ಕಿಂಗ್ಸ್ ಫೈನಲ್ ಪ್ರವೇಶಿಸಿದ್ದು, ಜೂನ್ 3 ರಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಾಟ ನಡೆಸಲಿದೆ.
Advertisement