
ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 191 ರನ್ ಗಳ ಗುರಿ ನೀಡಿದೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಜತ್ ಪಟಿದಾರ್ ಪಡೆ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿದೆ. ಆ ಮೂಲಕ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 191 ರನ್ ಗಳ ಸವಾವಿನ ಗುರಿ ನೀಡಿದೆ.
ಆರ್ ಸಿಹಿ ಪರ ಫಿಲ್ ಸಾಲ್ಟ್ 16 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 3 ಬೌಂಡರಿ ಸಹಿತ 43 ರನ್ ಗಳಿಸಿ ಅಜ್ಮತುಲ್ಲಾಗೆ ವಿಕೆಟ್ ಒಪ್ಪಿಸಿದರು.
ಬಳಿಕ ಕ್ರೀಸ್ ಗೆ ಬಂದ ಮಯಾಂಕ್ ಅಗರ್ವಾಲ್ 24 ರನ್ ಗಳಿಸಿದರೆ, ನಾಯಕ ರಜತ್ ಪಟಿಗಾರ್ 26 ರನ್, ಲಿವಿಂಗ್ ಸ್ಟೋನ್ 25, ಜಿತೇಶ್ ಶರ್ಮಾ 24 ರನ್ ಗಳಿಸಿದರು. ಅಂತಿಮ ಹಂತದಲ್ಲಿ ಬಂದ ರೊಮಾರಿಯೋ ಶೆಫರ್ಡ್ 17 ರನ್ ಗಳಿಸಿ ಅರ್ಶ್ ದೀಪ್ ಸಿಂಗ್ ಬೌಲಿಂಗ್ ನಲ್ಲಿ ಔಟಾದರು.
ಅಂತಿಮವಾಗಿ ಆರ್ ಸಿಬಿ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ ಪಂಜಾಬ್ ಗೆ ಗೆಲ್ಲಲು 191 ರನ್ ಸವಾಲಿನ ಗುರಿ ನೀಡಿದೆ.
ಪಂಜಾಬ್ ಪರ ಅರ್ಶ್ ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರೆ, ಅಜ್ಮತುಲ್ಲಾ, ವಿಜಯ್ ಕುಮಾರ್ ವೈಶಾಕ್ ಮತ್ತು ಚಹಲ್ ತಲಾ 1 ವಿಕೆಟ್ ಪಡೆದರು.
Advertisement