
ಅಹ್ಮದಾಬಾದ್: ಹಾಲಿ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸಿರುವ ಪ್ರಿಯಾಂಶ್ ಆರ್ಯ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಜತ್ ಪಟಿದಾರ್ ಪಡೆ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 191 ರನ್ ಗಳ ಸವಾಲಿನ ಗುರಿ ನೀಡಿದೆ.
ಈ ಮೊತ್ತವನ್ನು ಬೆನ್ನು ಹತ್ತಿರುವ ಪಂಜಾಬ್ ಕಿಂಗ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯ ಇಂದು 19 ಎಸೆತಗಳಲ್ಲಿ 4 ಬೌಂಡರಿ ಸಹಿತ 24 ರನ್ ಕಲೆ ಹಾಕಿದರು. ಆ ಮೂಲಕ ಹಾಲಿ ಐಪಿಎಲ್ ಟೂರ್ನಿಯಲ್ಲಿ ಅಪರೂಪದ ದಾಖಲೆಗೆ ಪಾತ್ರರಾದರು.
ಪ್ರಿಯಾಂಶ್ ಆರ್ಯ ಇಂದಿನ ಇನ್ನಿಂಗ್ಸ್ ಮೂಲಕ ಹಾಲಿ ಟೂರ್ನಿಯಲ್ಲಿ ತಮ್ಮ ರನ್ ಗಳಿಕೆಯನ್ನು 475ಕ್ಕೆ ಏರಿಸಿಕೊಂಡರು. ಅಂತೆಯೇ ಪದಾರ್ಪಣೆ ಐಪಿಎಲ್ ಆವೃತ್ತಿಯಲ್ಲೇ ಗರಿಷ್ಠ ರನ್ ಕಲೆಹಾಕಿದ ಭಾರತದ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾದರು. ಇದಕ್ಕೂ ಮೊದಲು 2020ರಲ್ಲಿ ದೇವದತ್ ಪಡಿಕ್ಕಲ್ 473 ರನ್ ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ ಪ್ರಿಯಾಂಶ್ ಆರ್ಯ ಅಗ್ರಸ್ಥಾನಕ್ಕೇರಿದ್ದಾರೆ.
ಉಳಿದಂತೆ ಈ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ 3ನೇ ಸ್ಥಾನದಲ್ಲಿದ್ದು, 2015ರ ಆವೃತ್ತಿಯಲ್ಲಿ ಪದಾರ್ಪಣೆ ಮಾಡಿದ್ದ ಅಯ್ಯರ್ ಆ ಟೂರ್ನಿಯಲ್ಲಿ 439 ರನ್ ಕಲೆ ಹಾಕಿದ್ದರು. ಬಳಿಕ 2022ರಲ್ಲಿ ಪದಾರ್ಪಣೆ ಮಾಡಿದ್ದ ತಿಲಕ್ ವರ್ಮಾ 397 ರನ್, 2017ರಲ್ಲಿ ಪದಾರ್ಪಣೆ ಮಾಡಿದ್ದ ರಾಹುಲ್ ತ್ರಿಪಾಠಿ 391 ಮತ್ತು 2021ರಲ್ಲಿ ವೆಂಕಟೇಶ್ ಅಯ್ಯರ್ 370 ರನ್ ಕಲೆ ಹಾಕಿದ್ದರು.
Most runs for an uncapped Indian batter in debut IPL season
475 - Priyansh Arya, 2025
473 - Devdutt Padikkal, 2020
439 - Shreyas Iyer, 2015
397 - Tilak Varma, 2022
391 - Rahul Tripathi, 2017
370 - Venkatesh Iyer, 2021
Advertisement