
ಬೆಂಗಳೂರು: ಕೊನೆಗೂ 18 ವರ್ಷಗಳ ಕಾಯುವಿಕೆಯ ನಂತರ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ (RCB) ತಂಡವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಸ್ವಾಗತಿಸಿದರು.
ಆರ್‌ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇಂದು ವಿಧಾಸೌಧದ ಮುಂದೆ ಭವ್ಯವಾದ ಅಭಿನಂದನಾ ಸಮಾರಂಭ ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು ಮತ್ತು ಶಾಸಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಜತ್ ಪಟಿದಾರ್ ನೇತೃತ್ವದ ತಂಡವನ್ನು ಸನ್ಮಾನಿಸಲಿದ್ದಾರೆ.
ಐಪಿಎಲ್(IPL) ಕಪ್ ಜಯಿಸಿ ತವರಿಗೆ ಮರಳಿರುವ RCB ತಂಡಕ್ಕೆ ಬೆಂಗಳೂರಿನಲ್ಲಿ ಅಭಿಮಾನಿಗಳಿಂದಲೂ ಅದ್ದೂರಿ ಸ್ವಾಗತ ದೊರೆತಿದೆ.
ಗುಜರಾತ್ನ ಅಹ್ಮದಾಬಾದ್ನಿಂದ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್‌ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆರ್‌ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ಖಾಸಗಿ ಹೋಟೆಲ್ ಗೆ ಕರೆದುಕೊಂಡು ಹೋಗಲಾಗುತ್ತಿದೆ. ಅಲ್ಲಿಂದ ಸಂಜೆ 4 ಗಂಟೆಗೆ ವಿಧಾನಸೌಧಕ್ಕೆ ತೆರಳಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. ವಿಧಾನಸೌಧದಿಂದ ಆಟಗಾರರನ್ನು ನೇರವಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗುತ್ತದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6 ಗಂಟೆಗೆ ಪರೇಡ್ ನಡೆಯಲಿದ್ದು, ಆಟಗಾರರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿ ನೋಡಬಹುದಾಗಿದೆ.
Advertisement