ಇಂಗ್ಲೆಂಡ್ ಲಯನ್ಸ್ ವಿರುದ್ಧ ಕೆಎಲ್ ರಾಹುಲ್ ಶತಕ; ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ!

ನಾರ್ಥಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಕೆ.ಎಲ್. ರಾಹುಲ್, 116 ರನ್ ಗಳಿಸಿದರು.
ಇಂಗ್ಲೆಂಡ್ ಲಯನ್ಸ್ ವಿರುದ್ಧ ಕೆಎಲ್ ರಾಹುಲ್ ಶತಕ; ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ!
Updated on

ಲಂಡನ್: ಇಂಗ್ಲೆಂಡ್ ಲಯನ್ಸ್ ವಿರುದ್ಧ ನಡೆಯುತ್ತಿರುವ ಎರಡನೇ ಅನಧಿಕೃತ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್ ಶತಕ ಸಿಡಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐದು ಟೆಸ್ಟ್‌ಗಳ ಸರಣಿಗೆ ಮುನ್ನ ಟೆಸ್ಟ್ ಆಟಕ್ಕೆ ರಾಹುಲ್ ಒಗ್ಗಿಕೊಂಡಿರುವುದು ಟೀಮ್ ಮ್ಯಾನೇಜ್ ಮೆಂಟ್ ಗೆ ಸಮಾಧಾನ ತಂದಿದೆ.

ನಾರ್ಥಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಕೆ.ಎಲ್. ರಾಹುಲ್, 116 ರನ್ ಗಳಿಸಿದರು.

ಆರಂಭಿಕ ಆಟಗಾರ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಳೆದ ತಿಂಗಳು ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ನಂತರ ಶುಭಮನ್ ಗಿಲ್ ನೇತೃತ್ವದ ಟೀಂ ಇಂಡಿಯಾದಲ್ಲಿ ಅಗ್ರ ಕ್ರಮಾಂಕದಲ್ಲಿ ಆಡುವವರು ಯಾರು ಎಂಬುದು ದೊಡ್ಡ ಸಮಸ್ಯೆಯಾಗಿತ್ತು. ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ ಮಾಡಬಲ್ಲಾ ಕೆ.ಎಲ್. ರಾಹುಲ್, ಇದೀಗ ಯಶಸ್ವಿ ಜೈಸ್ವಾಲ್ ಜೊತೆಗೆ ಆರಂಭಿಕರಾಗಿ ಆಡುವ ಸಾಧ್ಯತೆಯಿದೆ.

ನಂಬರ್ 4 ಕ್ರಮಾಂಕದಲ್ಲಿ ಶುಭ್ ಮನ್ ಗಿಲ್ ಅಥವಾ ಕರುಣ್ ನಾಯರ್ ಆಡುವ ಮೂಲಕ ಕೊಹ್ಲಿ ಸ್ಥಾನವನ್ನು ತುಂಬುವ ಸಾಧ್ಯತೆಯಿದೆ.

ಕರುಣ್ ನಾಯರ್ ಕೊನೆಯದಾಗಿ 2017ರಲ್ಲಿ ಟೆಸ್ಟ್ ಆಡಿದ್ದರು. ಕ್ಯಾಂಟರ್ಬರಿಯಲ್ಲಿ ನಡೆದ ಮೊದಲ ಅನಧಿಕೃತ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ್ದರು. ನಾವೀನೂ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ನಿರ್ಧರಿಸಿಲ್ಲ. ನಮಗೆ ಇನ್ನೂ ಸ್ವಲ್ಪ ಸಮಯಾವಕಾಶವಿದೆ ಎಂದು ಗಿಲ್ ಮುಂಬೈಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇಂಗ್ಲೆಂಡ್ ಲಯನ್ಸ್ ವಿರುದ್ಧ ಕೆಎಲ್ ರಾಹುಲ್ ಶತಕ; ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ!
Cricket: ಭಾರತದ ಟೆಸ್ಟ್ ತಂಡದ ನಾಯಕನಾಗಿ ಶುಭ್ ಮನ್ ಗಿಲ್ ನೇಮಕ, ಪಂತ್ ಉಪ ನಾಯಕ; ರಾಹುಲ್ ಗೆ ನಿರಾಶೆ!

ಲಂಡನ್‌ನಲ್ಲಿ 10 ದಿನಗಳ ಅಭ್ಯಾಸದಲ್ಲಿ ಪಾಲ್ಗೊಳ್ಳುತ್ತೇವೆ. ಆದ್ದರಿಂದ ನಮಗೆ ಇನ್ನೂ ಸ್ವಲ್ಪ ಸಮಯವಿದ್ದು, ಅಲ್ಲಿಗೆ ಹೋದ ನಂತರ ಬ್ಯಾಟಿಂಗ್ ಕ್ರಮಾಂಕವನ್ನು ನಿರ್ಧರಿಸಬಹುದು ಎಂದು ಭಾವಿಸುತ್ತೇನೆ ಎಂದು ಗಿಲ್ ಹೇಳಿದರು. ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್‌ ಸರಣಿಯು ಜೂನ್ 20 ರಂದು ಲೀಡ್ಸ್‌ನಲ್ಲಿ ಪ್ರಾರಂಭವಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com