ಭಾರತ vs ಇಂಗ್ಲೆಂಡ್ ಮೊದಲನೇ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಹಿನ್ನಡೆ; ರಿಷಭ್ ಪಂತ್‌ಗೆ ಗಾಯ

ಭಾನುವಾರ ಬೆಕೆನ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ನಾಯಕ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ತರಬೇತಿಯ ನೇತೃತ್ವ ವಹಿಸಿದ್ದರು.
Rishabh Pant
ರಿಷಭ್ ಪಂತ್‌
Updated on

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ಉಪನಾಯಕ ರಿಷಭ್ ಪಂತ್ ಗಾಯದಿಂದ ಬಳಲುತ್ತಿದ್ದಾರೆ. ಭಾನುವಾರ ಅಭ್ಯಾಸದ ಸಮಯದಲ್ಲಿ ಅವರ ಎಡಗೈಗೆ ಪೆಟ್ಟು ಬಿದ್ದಿದ್ದು, ಆತಂಕಕ್ಕೆ ಕಾರಣವಾಗಿತ್ತು. ಜೂನ್ 20ರಿಂದ ಪ್ರಾರಂಭವಾಗಲಿರುವ ಐದು ಪಂದ್ಯಗಳ ಸರಣಿಯಲ್ಲಿ ಶುಭ್ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸೆಣಸಲಿದೆ.

ಭಾನುವಾರ ಬೆಕೆನ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ನಾಯಕ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ತರಬೇತಿಯ ನೇತೃತ್ವ ವಹಿಸಿದ್ದರು. ರೆವ್‌ಸ್ಪೋರ್ಟ್ಸ್ ಪ್ರಕಾರ, ಪಂತ್ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಎಡಗೈಗೆ ಪೆಟ್ಟು ಬಿದ್ದಿದೆ. ಅವರು ಗಂಭೀರ ನೋವಿನ ಬಗ್ಗೆ ದೂರು ನೀಡಿದ್ದು, ತಂಡದ ವೈದ್ಯರು ಐಸ್ ಪ್ಯಾಕ್ ಹಚ್ಚಿ ಚಿಕಿತ್ಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇದಲ್ಲದೆ, ಪಂತ್ ತಮ್ಮ ತೋಳಿಗೆ ಬ್ಯಾಂಡೇಜ್ ಹಾಕಿಕೊಂಡಿದ್ದು, ಚೇತರಿಸಿಕೊಳ್ಳಲು ಉಳಿದ ನೆಟ್ ಸೆಷನ್ ಇಂದ ದೂರ ಉಳಿದರು ಎನ್ನಲಾಗಿದೆ.

ಐಪಿಎಲ್ 2025ರ ಆವೃತ್ತಿಯಲ್ಲಿ ಪಂತ್ ಅಷ್ಟೇನು ಉತ್ತಮ ಪ್ರದರ್ಶನ ನೀಡಿಲ್ಲ. ಪಂದ್ಯಾವಳಿಯಲ್ಲಿ ಒಂದು ಶತಕ ಮತ್ತು ಅರ್ಧಶತಕವನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾದರು. ಪಂತ್ ಅವರನ್ನು 27 ಕೋಟಿ ರೂಪಾಯಿ ನೀಡಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಖರೀದಿಸಿತ್ತು.

Rishabh Pant
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ಯುವ ಪಡೆ ಅಭ್ಯಾಸ ಆರಂಭ!

ಅವರು ಕೊನೆಯ ಬಾರಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾಗವಹಿಸಿದ್ದರು. ಅಲ್ಲಿಯೂ ಸಹ, ಅವರು ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದರು. ಒಂದಂಕಿಗೆ ವಿಕೆಟ್ ನೀಡಿ ನಿರ್ಗಮಿಸಿದ್ದರು.

ಈಮಧ್ಯೆ, ಭಾರತದ ಬ್ಯಾಕ್-ಅಪ್ ಕೀಪರ್ ಧ್ರುವ್ ಜುರೆಲ್ ಇಂಗ್ಲೆಂಡ್ ಲಯನ್ಸ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದ ಪರವಾಗಿ ಅತ್ಯಂತ ಸ್ಥಿರವಾಗಿ ಕಾರ್ಯನಿರ್ವಹಿಸಿದ್ದಾರೆ. ಗಾಯದಿಂದಾಗಿ ಪಂತ್ ಆಡಲು ಸಾಧ್ಯವಾಗದಿದ್ದರೆ, ಜುರೆಲ್ ಅವರಿಗೆ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ.

ಜೂನ್ 13ರಿಂದ ಲೀಡ್ಸ್‌ನಲ್ಲಿ ನಡೆಯುವ ಮೊದಲ ಟೆಸ್ಟ್‌ಗೆ ಸ್ವಲ್ಪ ಮೊದಲು ಭಾರತ 'ಎ' ತಂಡದ ವಿರುದ್ಧ ಇಂಟ್ರಾ-ಸ್ಕ್ವಾಡ್ ಪಂದ್ಯವನ್ನು ಆಡಲಿದೆ. ಆ ಹೊತ್ತಿಗೆ ಪಂತ್ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com