ಲಾರ್ಡ್ಸ್‌ನಲ್ಲಿ ಟೀಂ ಇಂಡಿಯಾ ಅಭ್ಯಾಸ; WTC ಫೈನಲ್‌ಗೂ ಮುನ್ನ ಆಸ್ಟ್ರೇಲಿಯಾಗೆ ಅನುಮತಿ ನಿರಾಕರಣೆ: ವರದಿ

ಜೂನ್ 11ರಂದು ಡಬ್ಲ್ಯುಟಿಸಿ ಫೈನಲ್ ಪಂದ್ಯ ಪ್ರಾರಂಭವಾಗುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಈಗ ತರಬೇತಿ ಸೌಲಭ್ಯಗಳನ್ನು ಬಳಸಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ತಿಳಿಸಲಾಗಿದೆ.
ಇಂಗ್ಲೆಂಡ್‌ನಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್
ಇಂಗ್ಲೆಂಡ್‌ನಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್
Updated on

ದಕ್ಷಿಣ ಆಫ್ರಿಕಾ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಅಭ್ಯಾಸ ಆರಂಭಿಸಲು ಮುಂದಾಗಿರುವ ಬೆನ್ನಲ್ಲೇ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ಆರಂಭಿಸಲು ತಂಡಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.

ಜೂನ್ 11ರಂದು ಡಬ್ಲ್ಯುಟಿಸಿ ಫೈನಲ್ ಪಂದ್ಯ ಪ್ರಾರಂಭವಾಗುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಈಗ ತರಬೇತಿ ಸೌಲಭ್ಯಗಳನ್ನು ಬಳಸಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ತಿಳಿಸಲಾಗಿದೆ. ಪ್ಯಾಟ್ ಕಮ್ಮಿನ್ಸ್ ನೇತೃತ್ವದ ತಂಡಕ್ಕೆ ಅನುಮತಿ ನಿರಾಕರಿಸಿರುವುದರ ಹಿಂದಿನ ನಿಖರ ಕಾರಣ ತಿಳಿದಿಲ್ಲವಾದರೂ, 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್‌ನಲ್ಲಿರುವ ಭಾರತ ತಂಡ ಅದೇ ಸ್ಥಳದಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಫಾಕ್ಸ್ ಕ್ರಿಕೆಟ್ ವರದಿ ಪ್ರಕಾರ, ಲಾರ್ಡ್ಸ್‌ನಲ್ಲಿ ಅಭ್ಯಾಸ ನಡೆಸಲು ಭಾರತ ತಂಡಕ್ಕೆ ಅವಕಾಶ ನೀಡಲಾಗಿತ್ತು. ಈ ಕಾರಣದಿಂದಲೇ ಆಸ್ಟ್ರೇಲಿಯಾ ತಂಡಕ್ಕೆ ಮೈದಾನಕ್ಕೆ ಪ್ರವೇಶಿಸಲು ಅನುಮತಿ ನಿರಾಕರಿಸಲಾಯಿತು ಎಂದು ವರದಿಯಾಗಿದೆ.

ಡಬ್ಲ್ಯುಟಿಸಿ ಫೈನಲ್ ಜೂನ್ 11ರಂದು ಪ್ರಾರಂಭವಾಗಲಿದ್ದು, ಭಾರತ ತಂಡವು ಜೂನ್ 20ರಂದು ಇಂಗ್ಲೆಂಡ್ ವಿರುದ್ಧ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ವಾಸ್ತವವಾಗಿ, ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಟೆಸ್ಟ್ ಪಂದ್ಯವು ಸರಣಿಯ ಮೂರನೇ ಪಂದ್ಯವಾಗಿದ್ದು, ಜುಲೈ 10 ರಂದು ಪ್ರಾರಂಭವಾಗಲಿದೆ ಎಂದು ವರದಿ ಹೈಲೈಟ್ ಮಾಡಿದೆ.

ಆಸ್ಟ್ರೇಲಿಯಾದ ಆಟಗಾರರಿಗೆ ಆರಂಭದಲ್ಲಿ ಅಭ್ಯಾಸ ನಡೆಸಲು ಅವಕಾಶ ನಿರಾಕರಿಸಲಾಯಿತಾದರೂ, ಅಂತಿಮವಾಗಿ ಅವರಿಗೆ ಪ್ರವೇಶ ನೀಡಲಾಯಿತು ಮತ್ತು ಭಾನುವಾರ ಮೈದಾನದಲ್ಲಿ ಅಭ್ಯಾಸ ಮಾಡಲು ಸಾಧ್ಯವಾಯಿತು.

ಇಂಗ್ಲೆಂಡ್‌ನಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ಯುವ ಪಡೆ ಅಭ್ಯಾಸ ಆರಂಭ!

ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ನಂತರ ತಮ್ಮ ತಂಡದ ಸಿದ್ಧತೆಗಳು, ಯೋಜನೆಗಳು ಮತ್ತು ಲಾರ್ಡ್ಸ್‌ನಲ್ಲಿ ಆಡುವಾಗಲೆಲ್ಲಾ ಅವರು ನಿರಂತರವಾಗಿ ಎದುರಿಸುವ ಸಮಸ್ಯೆಗಳ ಬಗ್ಗೆ ಮಾತನಾಡಿದರು.

ಇಂದು ಬೆಳಿಗ್ಗೆ ಕ್ರೀಡಾಂಗಣ ಶಾಂತ ಮತ್ತು ಖಾಲಿಯಾಗಿದ್ದ ಕಾರಣ, ಇದು ಕ್ರೀಡಾಂಗಣದ ಅತ್ಯುತ್ತಮ ಆವೃತ್ತಿ ಎಂದು ನಾನು ಭಾವಿಸುತ್ತೇನೆ. ಈ ಬಾರಿ ಎಲ್ಲವೂ ಶಾಂತ ರೀಯಿತಿಂದ ಕೂಡಿರುತ್ತದೆ ಎಂದು ನನಗೆ ಖಚಿತವಾಗಿದೆ ಎಂದು ಅವರು ಹೇಳಿದರು.

'ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಸರಣಿಯ ಸಮಯದಲ್ಲಿ ಸಾಕಷ್ಟು ಉದ್ವಿಗ್ನತೆ ಉಂಟಾಗಿತ್ತು. ಅದರಲ್ಲಿ ಭಾಗಿಯಾಗಿದ್ದ ಜನರು ಆ ಅನುಭವದಿಂದ ಕಲಿತಿರುತ್ತಾರೆ ಮತ್ತು ಈ ಬಾರಿ ಅವರು ಹೆಚ್ಚು ಗೌರವಯುತವಾಗಿ ಅಥವಾ ಸಭ್ಯವಾಗಿ ವರ್ತಿಸುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ' ಎಂದು ಹೇಳಿದರು.

ಡಬ್ಲ್ಯುಟಿಸಿ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾದ ಬೌಲಿಂಗ್ ದಾಳಿಯನ್ನು ಪ್ಯಾಟ್ ಕಮ್ಮಿನ್ಸ್ ಮುನ್ನಡೆಸಲಿದ್ದಾರೆ. ಅವರೊಂದಿಗೆ ಮಿಚೆಲ್ ಸ್ಟಾರ್ಕ್, ಜಾಶ್ ಹೇಜಲ್‌ವುಡ್ ಮತ್ತು ನಾಥನ್ ಲಿಯಾನ್ ಅವರಂತಹ ಆಟಗಾರರು ಇದ್ದಾರೆ. ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಡೌನ್ ಅಂಡರ್‌ನಿಂದ 4 ನೇ ಸೀಮ್-ಬೌಲಿಂಗ್ ಆಯ್ಕೆಯಾಗುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com