
ವೆಸ್ಟ್ ಇಂಡೀಸ್ ವಿಕೆಟ್ ಕೀಪರ್ , ಟಿ-20 ಅತ್ಯುತ್ತಮ ಬ್ಯಾಟರ್ ಆಗಿದ್ದ ನಿಕೋಲಸ್ ಪೂರನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಸೋಮವಾರ ರಾತ್ರಿ ವಿದಾಯ ಹೇಳಿದ್ದಾರೆ. ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ.
ದಕ್ಷಿಣ ಆಫ್ರಿಕಾದ ವಿಕೆಟ್-ಕೀಪರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಪೂರನ್ ಈ ನಿರ್ಧಾರ ಘೋಷಿಸಿದ್ದಾರೆ.
ಫ್ರಾಂಚೈಸಿ ಕ್ರಿಕೆಟ್ ನಲ್ಲಿ ಮುಂದುವರೆಯಲು ಅವರು ಬಯಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಫೋಸ್ಟ್ ಮಾಡಿರುವ ಪೂರನ್, ಹೆಚ್ಚು ಚಿಂತನೆ ಮತ್ತು ಚರ್ಚೆಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
29 ವರ್ಷದ ಪೂರನ್ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಆಗಿ 106 ಪಂದ್ಯಗಳಲ್ಲಿ ಆಡಿದ್ದಾರೆ. ಟಿ-20 ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಪರ ಅತಿ ಹೆಚ್ಚು 2,275 ರನ್ ಗಳಿಸಿದ ಆಟಗಾರ ಆಗಿದ್ದಾರೆ.
Advertisement