WTC 2025: 27 ವರ್ಷಗಳ ಬಳಿಕ ICC ಟ್ರೋಫಿ ಬರ ನೀಗಿಸಿಕೊಂಡ South Africa!

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ ಗೆದ್ದು ದಕ್ಷಿಣ ಆಫ್ರಿಕಾ ಇತಿಹಾಸ ನಿರ್ಮಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ ಗಳಿಂದ ಗೆಲುವು ಸಾಧಿಸಿತು.
South Africa with Trophy
ದಕ್ಷಿಣ ಆಫ್ರಿಕಾ ಟ್ರೋಫಿಯೊಂದಿಗೆ
Updated on

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ ಗೆದ್ದು ದಕ್ಷಿಣ ಆಫ್ರಿಕಾ ಇತಿಹಾಸ ನಿರ್ಮಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ ಗಳಿಂದ ಗೆಲುವು ಸಾಧಿಸಿತು. 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಂಡಿದ್ದು ಇದು ಅವರ ಎರಡನೇ ಟ್ರೋಫಿ ಆಗಿದೆ. ಈ ಮೂಲಕ ದಕ್ಷಿಣ ಆಫ್ರಿಕಾಕ್ಕಿದ್ದ ಚೋಕರ್ಸ್ ಹಣೆಪಟ್ಟಿ ಕಳಚಿದೆ.

ಲಂಡನ್ ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 212 ರನ್ ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾ 138 ರನ್ ಗಳಿಗೆ ಆಲೌಟ್ ಆಗುವ 74 ರನ್ ಗಳ ಹಿನ್ನಡೆ ಅನುಭವಿಸಿತ್ತು. ನಂತರ ಎರಡನೇ ಇನ್ನಿಂಗ್ಸ್ ಮಾಡಿದ ಆಸ್ಟ್ರೇಲಿಯಾ 207 ರನ್ ಗಳಿಗೆ ಆಲೌಟ್ ಆಗಿದ್ದು ದಕ್ಷಿಣ ಆಫ್ರಿಕಾಗೆ ಗೆಲ್ಲಲು 282 ರನ್ ಗಳ ಗುರಿ ನೀಡಿತ್ತು.

ದಕ್ಷಿಣ ಆಫ್ರಿಕಾ ಪರ ಐಡೆನ್ ಮಾರ್ಕ್ರಾಮ್ 136 ರನ್ ಗಳ ಭರ್ಜರಿ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇನ್ನು ತಂಡದ ನಾಯಕ ಟೆಂಬಾ ಬವುಮಾ 66 ರನ್ ಬಾರಿಸಿದರು. ಅಂತಿಮವಾಗಿ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 282 ರನ್ ಬಾರಿಸುವ ಮೂಲಕ ಚೊಚ್ಚಲ ಟೆಸ್ಟ್ ಚಾಂಪಿಯನ್ಶಿಪ್ ಟ್ರೋಫಿ ಮುಡಿಗೇರಿಸಿಕೊಂಡಿತು. ಆ ಮೂಲಕ ಎರಡನೇ ಬಾರಿಗೆ ಟೆಸ್ಟ್ ಚಾಂಪಿಯನ್ಶಿಪ್ ಟ್ರೋಫಿ ಗೆಲ್ಲುವ ಆಸ್ಟ್ರೇಲಿಯಾ ಕನಸು ಭಗ್ನವಾಗಿದೆ.

South Africa with Trophy
WTC 2025 Final: Allan Donald ದಾಖಲೆ ಮುರಿದ Kagiso Rabada; ದಕ್ಷಿಣ ಆಫ್ರಿಕಾದ 4ನೇ ಗರಿಷ್ಠ ಟೆಸ್ಟ್ ವಿಕೆಟ್ ಟೇಕರ್!

ದಕ್ಷಿಣ ಆಫ್ರಿಕಾ ಪರ ಬೌಲಿಂಗ್ ನಲ್ಲಿ ಕಾಗಿಸೋ ರಬಾಡಾ ಒಟ್ಟಾರೆ 9 ವಿಕೆಟ್ ಪಡೆದಿದ್ದರೆ, ಮಾರ್ಕೊ ಜಾನ್ಸೆನ್ 4 ಮತ್ತು ಲುಂಗಿ ಎನ್‌ಗಿಡಿ 3 ವಿಕೆಟ್ ಪಡೆದು ದಕ್ಷಿಣ ಆಫ್ರಿಕಾದ ಚೊಚ್ಚಲ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com