
ಲೀಡ್ಸ್: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಗಾಗಿ ಐದು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಎಡಗೈ ಬ್ಯಾಟ್ಸ್‌ಮನ್ ಬಿ ಸಾಯಿ ಸುದರ್ಶನ್ ಅವರು ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದು, ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಮಧ್ಯಮ ಕ್ರಮಾಂಕದ ಅನುಭವಿ ಬ್ಯಾಟ್ಸ್‌ಮನ್ ಕರುಣ್ ನಾಯರ್, ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಸದ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ತಂಡದ ನಾಯಕ ಶುಭಮನ್ ಗಿಲ್ ಟಾಸ್ ವೇಳೆ ಸಾಯಿ ಸುದರ್ಶನ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ಖಚಿತಪಡಿಸಿದರು.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್ ), ಕರುಣ್ ನಾಯರ್, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್: ಝ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್.
Advertisement