
ಭಾರತದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಐದು ವಿಕೆಟ್ ಗೊಂಚಲು ಪಡೆದು ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಲೀಡ್ಸ್ ಟೆಸ್ಟ್‌ನ ಎರಡನೇ ದಿನದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಎರಡನೇ ದಿನದ ಆಟದ ಅಂತ್ಯದ ವೇಳೆಗೆ ಬುಮ್ರಾ ಐದು ವಿಕೆಟ್‌ಗಳನ್ನು ಕಬಳಿಸಿ ದೊಡ್ಡ ಸಾಧನೆ ಮಾಡಿದರು.
ಜಸ್ಪ್ರೀತ್ ಬುಮ್ರಾ ಭಾರತೀಯ ತಂಡದ ಅನುಭವಿ ಬೌಲರ್ ಮತ್ತು ವೇಗದ ಬೌಲಿಂಗ್ ದಾಳಿಯ ರೂವಾರಿ. ಬುಮ್ರಾ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶಿಸಿದ್ದರು. ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರ ಪಾತ್ರ ಮಹತ್ವದ್ದಾಗಿದ್ದು, ಮೊದಲ ಪಂದ್ಯದಲ್ಲಿ ಅವರು ಇದನ್ನು ಸಾಬೀತುಪಡಿಸಿದ್ದಾರೆ. ಬೂಮ್-ಬೂಮ್ ಬುಮ್ರಾ ಅವರ ಮ್ಯಾಜಿಕ್ ಲೀಡ್ಸ್‌ನಲ್ಲಿ ಕಂಡುಬಂದಿದ್ದು ದೊಡ್ಡ ಸಾಧನೆ ಮಾಡಿದ್ದಾರೆ.
ಜಸ್ಪ್ರೀತ್ ಬುಮ್ರಾ SENA ದೇಶಗಳಲ್ಲಿ ಅಂದರೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಏಷ್ಯನ್ ಬೌಲರ್ ಆಗಿದ್ದಾರೆ. ಈ ವಿಷಯದಲ್ಲಿ ಜಸ್ಪ್ರೀತ್ ಬುಮ್ರಾ ಪಾಕಿಸ್ತಾನದ ಮಾಜಿ ಬೌಲರ್ ವಾಸಿಮ್ ಅಕ್ರಮ್ ಅವರ ದಾಖಲೆಯನ್ನು ಮುರಿದಿದ್ದಾರೆ. ಬುಮ್ರಾ ಈಗ ಸೆನಾ ದೇಶಗಳಲ್ಲಿ 149 ವಿಕೆಟ್‌ಗಳನ್ನು ಪಡೆದಿದ್ದರೆ ಅಕ್ರಮ್ ಈ ದೇಶಗಳಲ್ಲಿ 146 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದೇ ಸಮಯದಲ್ಲಿ, ಭಾರತದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ 141 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ವೇಗದ ಬೌಲರ್ ಇಶಾಂತ್ ಶರ್ಮಾ 130 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.
Advertisement