Cricket: 'ಕೋಚ್ ಆಗಲು ನಾನು ರೆಡಿ...'; ಭಾರತ ತಂಡಕ್ಕೆ ಮಾಜಿ ನಾಯಕ Sourav Ganguly ವಾಪಸ್?

ಅಚ್ಚರಿಯಾದರೂ ಇದು ಸತ್ಯ.. ಮಾಜಿ ನಾಯಕ ಸೌರವ್ ಗಂಗೂಲಿ ಟೀಂ ಇಂಡಿಯಾಗೆ ವಾಪಸ್ ಆಗುವ ಇಂಗಿತ ವ್ಯಕ್ತಪಡಿಸಿದ್ದು ಈ ಬಾರಿ ವಿಶೇಷ ಪಾತ್ರದಲ್ಲಿ ಭಾರತ ತಂಡದಲ್ಲಿ ಜವಾಬ್ದಾರಿ ನಿಭಾಯಿಸುವುದಾಗಿ ಹೇಳಿದ್ದಾರೆ.
 Sourav Ganguly
ಸೌರವ್ ಗಂಗೂಲಿ
Updated on

ಮುಂಬೈ: ಭಾರತ ಕ್ರಿಕೆಟ್ ತಂಡ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿರುವ ಸೌರವ್ ಗಂಗೂಲಿ ಮತ್ತೆ ತಂಡಕ್ಕೆ ವಾಪಸ್ ಆಗಲು ಸಿದ್ಧವಿರುವುದಾಗಿ ಘೋಷಿಸಿದ್ದಾರೆ.

ಅಚ್ಚರಿಯಾದರೂ ಇದು ಸತ್ಯ.. ಮಾಜಿ ನಾಯಕ ಸೌರವ್ ಗಂಗೂಲಿ ಟೀಂ ಇಂಡಿಯಾಗೆ ವಾಪಸ್ ಆಗುವ ಇಂಗಿತ ವ್ಯಕ್ತಪಡಿಸಿದ್ದು ಈ ಬಾರಿ ವಿಶೇಷ ಪಾತ್ರದಲ್ಲಿ ಭಾರತ ತಂಡದಲ್ಲಿ ಜವಾಬ್ದಾರಿ ನಿಭಾಯಿಸುವುದಾಗಿ ಹೇಳಿದ್ದಾರೆ.

ಈ ಹಿಂದೆ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದ ಸೌರವ್ ಗಂಗೂಲಿ, ಆ ಬಳಿಕ ಬಿಸಿಸಿಐ ಅಧ್ಯಕ್ಷರಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಂದು ಪ್ರಮುಖ ಹುದ್ದೆ ನಿಭಾಯಿಸುವ ಆಸೆ ವ್ಯಕ್ತಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಕಾಣಿಸಿಕೊಂಡಿದ್ದ ಸೌರವ್ ಗಂಗೂಲಿಗೆ, ಭಾರತದ ಮುಖ್ಯ ಕೋಚ್ ಆಗಿ ಕೆಲಸ ಮಾಡಲು ನೀವು ಎಂದಾದರೂ ಆಸಕ್ತಿ ಹೊಂದಿದ್ದೀರಾ ಎಂದು ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ್ದ 'ನಾನು ಅದರ ಬಗ್ಗೆ ಎಂದಿಗೂ ಯೋಚಿಸಲಿಲ್ಲ.

 Sourav Ganguly
'ತುಂಬಾ ತುಂಬಾ ನಿರಾಶಾದಾಯಕ': ಟೀಂ ಇಂಡಿಯಾ ಬಗ್ಗೆ ಸುನೀಲ್ ಗವಾಸ್ಕರ್ ಟೀಕೆ; ಯಶಸ್ವಿ ಜೈಸ್ವಾಲ್ ವಿರುದ್ಧ ಕಿಡಿ

ಏಕೆಂದರೆ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ನಾನು ಆಡಳಿತಕ್ಕೆ ಹೋದೆ. ನಾನು ನನ್ನನ್ನು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ​​ಮತ್ತು ಬಿಸಿಸಿಐ ಅಧ್ಯಕ್ಷನನ್ನಾಗಿ ಮಾಡಿಕೊಂಡೆ. ಹೀಗಾಗಿ ನಾನು ಕೋಚ್ ಹುದ್ದೆ ಬಗ್ಗೆ ಯೋಚಿಸಿರಲಿಲ್ಲ' ಎಂದು ಗಂಗೂಲಿ ಹೇಳಿದ್ದಾರೆ.

ಅಂತೆಯೇ 'ಆದರೆ, ಭವಿಷ್ಯದಲ್ಲಿ ಏನಾಗುತ್ತದೆ ಎಂದು ಅವರು ಹೇಳಲು ಸಾಧ್ಯವಿಲ್ಲ. ಈಗ ನನಗೆ ಕೇವಲ 50 ವರ್ಷ. ಅವಕಾಶ ಬಂದರೆ, ನಾನು ಮುಖ್ಯ ಕೋಚ್ ಆಗಿ ಕೆಲಸ ಮಾಡಲು ಮುಕ್ತನಾಗಿದ್ದೇನೆ. ಅಂತಹದೊಂದು ಅವಕಾಶ ಸಿಕ್ಕರೆ ಖಂಡಿತವಾಗಿಯೂ ನಾನು ಕೋಚ್ ಹುದ್ದೆಯನ್ನು ಅಲಂಕರಿಸಲು ಸಿದ್ಧನಿದ್ದೇನೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಯಶಸ್ವಿ ನಾಯಕ

ಟೀಮ್ ಇಂಡಿಯಾ 421 ಪಂದ್ಯಗಳನ್ನಾಡಿರುವ ಸೌರವ್ ಗಂಗೂಲಿ 485 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 29305 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 18433 ರನ್ ಕಲೆಹಾಕಿದ್ದಾರೆ. ಇದರ ನಡುವೆ 106 ಅರ್ಧಶತಕಗಳು ಹಾಗೂ 38 ಶತಕಗಳು ಮೂಡಿಬಂದಿವೆ. ಈ ಮೂಲಕ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com