Video: ಜೀವನದ ಕೊನೆ ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್; ಮೈದಾನದಲ್ಲೇ ಕುಸಿದು ಬಿದ್ದು ಸಾವು!
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಯುವಜನತೆಯೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಸಿಕ್ಸರ್ ಹೊಡೆದ ಬಳಿಕ ಮೈದಾನದಲ್ಲಿಯೇ ಹೃದಯಾಘಾತದಿಂದ ಬ್ಯಾಟ್ಸ್‌ಮನ್ ಒಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಪಂಜಾಬ್‌ನ ಫಿರೋಜ್‌ಪುರದಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ, ಬ್ಯಾಟ್ಸ್‌ಮನ್ ಇದ್ದಕ್ಕಿದ್ದಂತೆ ಮೈದಾನದಲ್ಲೇ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಬ್ಯಾಟ್ಸ್‌ಮನ್ ಚೆಂಡನ್ನು ಸಿಕ್ಸರ್ ಬಾರಿಸುತ್ತಾರೆ. ಬಳಿಕ ಪಿಚ್ ಮಧ್ಯಕ್ಕೆ ನಡೆದುಬಂದು ಕುಳಿತುಕೊಂ ಅವರು ಹಾಗೆಯೇ ಕೆಳಗೆ ಬಿದ್ದಿದ್ದಾರೆ. ಅವರು ಪ್ರಜ್ಞೆ ಕಳೆದುಕೊಂಡ ತಕ್ಷಣ, ಇತರ ಆಟಗಾರರು ಸಿಪಿಆರ್ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಅವರು ಹೃದಯಾಘಾತದಿಂದ ತಕ್ಷಣವೇ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಫಿರೋಜ್‌ಪುರದ ಹರ್ಜೀತ್ ಸಿಂಗ್ ಎಂದು ಗುರುತಿಸಲಾಗಿದೆ.
2024 ರಲ್ಲಿ ಇದೇ ರೀತಿಯ ಘಟನೆಯಲ್ಲಿ, ಪುಣೆಯ ಗರ್ವಾರೆ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ 35 ವರ್ಷದ ಕ್ರಿಕೆಟಿಗ ಹೃದಯಾಘಾತದಿಂದ ಮೃತಪಟ್ಟಿದ್ದರು. ಇಮ್ರಾನ್ ಪಟೇಲ್ ಎಂಬುವವರು ಆರಂಭಿಕನಾಗಿ ಬ್ಯಾಟಿಂಗ್ ಮಾಡಲು ಬಂದರು ಮತ್ತು ಮೈದಾನದಲ್ಲಿ ಸ್ವಲ್ಪ ಸಮಯ ಕಳೆದ ನಂತರ ಎದೆ ಮತ್ತು ತೋಳು ನೋವಿನ ಬಗ್ಗೆ ಹೇಳಿದ್ದಾರೆ.
ಅವರು ಈ ವಿಷಯವನ್ನು ಮೈದಾನದಲ್ಲಿರುವ ಅಂಪೈರ್‌ಗಳಿಗೆ ತಿಳಿಸಿದ್ದಾರೆ ಮತ್ತು ಅವರು ಅವರಿಗೆ ಮೈದಾನದಿಂದ ಹೊರಹೋಗಲು ಅನುಮತಿ ನೀಡಿದ್ದಾರೆ. ಆದಾಗ್ಯೂ, ಪೆವಿಲಿಯನ್‌ಗೆ ಹಿಂತಿರುಗುವಾಗ, ಇಮ್ರಾನ್ ಕುಸಿದು ಬಿದ್ದಿದ್ದಾರೆ. ಇಡೀ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇಮ್ರಾನ್ ಕುಸಿದು ಬೀಳುತ್ತಿದ್ದಂತೆ, ಮೈದಾನದಲ್ಲಿದ್ದ ಇತರ ಆಟಗಾರರು ಅವರ ಕಡೆಗೆ ಧಾವಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆ ವೇಳೆಗಾಗಲೇ ಇಮ್ರಾನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಇಮ್ರಾನ್ ತುಂಬಾ ಆರೋಗ್ಯವಾಗಿದ್ದರು. ದೈಹಿಕವಾಗಿ ಸದೃಢರಾಗಿದ್ದರು. ಆಲ್‌ರೌಂಡರ್ ಆಗಿದ್ದ ಇಮ್ರಾನ್ ಪಂದ್ಯದುದ್ದಕ್ಕೂ ಸಕ್ರಿಯ ಆಟಗಾರರಾಗಿದ್ದರು. ಅವರು ಹೃದಯಾಘಾತದಿಂದ ಸಾವಿಗೀಡಾಗಿದ್ದು ಹಲವರನ್ನು ದಿಗ್ಭ್ರಮೆಗೊಳಿಸಿತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ