
2025ರ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು.
ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡವು ತೊಂದರೆಗೆ ಸಿಲುಕಿದೆ. ಭಾರತ ತಂಡ 30 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಗ್ಲೆನ್ ಫಿಲಿಪ್ಸ್ ಅದ್ಭುತ ಕ್ಯಾಚ್ ಗೆ ವಿರಾಟ್ ಕೊಹ್ಲಿ ಬಲಿಯಾದರು. ವಿರಾಟ್ ಕೊಹ್ಲಿಯ ಏಕದಿನ ಕ್ರಿಕೆಟ್ ನಲ್ಲಿ 300ನೇ ಪಂದ್ಯ ಇದಾಗಿತ್ತು.
ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ 300ನೇ ಏಕದಿನ ಪಂದ್ಯವನ್ನು ಆಡುತ್ತಿದ್ದರು. ಕೊಹ್ಲಿ ಆರಂಭದಿಂದಲೂ ಕಷ್ಟಪಡುತ್ತಿದ್ದರು. ಮ್ಯಾಟ್ ಹೆನ್ರಿ ಇನ್ನಿಂಗ್ಸ್‌ನ 7ನೇ ಓವರ್ ಬೌಲಿಂಗ್ ಮಾಡುತ್ತಿದ್ದರು. ಇದರ ಮೂರನೇ ಎಸೆತದಲ್ಲಿ ಕೊಹ್ಲಿ ಬೌಂಡರಿ ಬಾರಿಸಿದರು.
ಆದರೆ ನಾಲ್ಕನೇ ಎಸೆತದಲ್ಲಿ ಗ್ಲೆನ್ ಫಿಲಿಪ್ಸ್ ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಕಿಂಗ್ ಕೊಹ್ಲಿ ಕ್ಯಾಚ್ ಹಿಡಿದರು. ಇದಕ್ಕೆ ವಿರಾಟ್ ಪತ್ನಿ ಅನುಷ್ಕಾ ಶರ್ಮಾ ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅವರ ಪ್ರತಿಕ್ರಿಯೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿದೆ. 300ನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್ ಕೆಲಸ ಮಾಡಲಿಲ್ಲ. ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ವೃತ್ತಿಜೀವನದ 300ನೇ ಏಕದಿನ ಪಂದ್ಯವನ್ನು ಆಡುತ್ತಿದ್ದರು. ಮತ್ತೊಮ್ಮೆ ಅವರು ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪ್ರದರ್ಶನ ನೀಡುತ್ತಾರೆ ಎಂದು ಅಭಿಮಾನಿಗಳು ಆಶಿಸಿದ್ದರು. ಆದರೆ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ. ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದ ಕೊಹ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಕೇವಲ 11 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.
Advertisement