
ಮೈಸೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2025ರ ಫೈನಲ್ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಮಣಿಸಿದ ಪಂಜಾಬ್ ದಿ ಶೇರ್ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಮೈಸೂರಿನ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ಇಂದು ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಫೈನಲ್ ಕಾಳಗದಲ್ಲಿ ಟಾಸ್ ಗೆದ್ದ ಪಂಜಾಬ್ ದಿ ಶೇರ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ಮೊದಲ 10 ಓವರ್ ನ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 89 ರನ್ ಕಲೆ ಹಾಕಿತು. ಈ ಮೊತ್ತಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಪಂಜಾಬ್ ದಿ ಶೇರ್ ತಂಡ ತನ್ನ ಪಾಲಿನ 10 ಓವರ್ ನ ಮೊದಲ ಇನ್ನಿಂಗ್ಸ್ ನಲ್ಲಿ 103 ರನ್ ಕಲೆಹಾಕಿತು. ಆ ಮೂಲಕ 14 ರನ್ ಗಳ ಮುನ್ನಡೆ ಪಡೆದುಕೊಂಡಿತು.
ಇದಕ್ಕೆ ಉತ್ತರವಾಗಿ 2ನೇ ಇನ್ನಿಂಗ್ಸ್ ಆರಂಭಿಸಿದ ಚೆನ್ನೈ ರೈನೋಸ್ ತಂಡ 2ನೇ ಇನ್ನಿಂಗ್ಸ್ ನ 10 ಓವರ್ ನಲ್ಲಿ 6 ವಿಕೆಟ್ ಕಳೆದುಕೊಂಡು 85ರನ್ ಮಾತ್ರ ಕಲೆಹಾಕಿ ಪಂಜಾಬ್ ಗೆಲ್ಲಲು 71ರನ್ ಗಳ ಗುರಿ ನೀಡಿತು. ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ 8 ಓವರ್ ನಲ್ಲೇ ಕೇವಲ 2 ವಿಕೆಟ್ ಕಳೆದುಕೊಂಡು 75ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.
ಅಲ್ಲದೆ 2025ನೇ ಸಾಲಿನ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
Advertisement