
ದುಬೈ: ಭಾನುವಾರ ಇಲ್ಲಿ ನಡೆಯುತ್ತಿರುವ ‘ಎ’ ಗುಂಪಿನ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಪಂದ್ಯದಲ್ಲಿ ಭಾರತ ವಿರುದ್ಧ ನ್ಯೂಜಿಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಡೆವೊನ್ ಕಾನ್ವೇ ಬದಲಿಗೆ ಡೆರಿಲ್ ಮಿಚೆಲ್ ಆಡುತ್ತಿದ್ದಾರೆ.
ಟೀಂ ಇಂಡಿಯಾ ಕೂಡ ಹರ್ಷಿತ್ ರಾಣಾಗೆ ವಿಶ್ರಾಂತಿ ನೀಡಿದ್ದು, ಸ್ಪಿನ್ನರ್ ವರುಣ್ ಚಕ್ರವರ್ತಿಯನ್ನು ಕರೆತಂದಿದೆ.
ಟಾಸ್ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಈ ಹಿಂದಿನ ಎರಡು ಪಂದ್ಯಗಳಲ್ಲಿ ಚೇಸ್ ಮಾಡಿದ್ದ ಕಾರಣ ನಾವು ಮೊದಲು ಬ್ಯಾಟಿಂಗ್ ಮಾಡಲು ಬಯಸಿದ್ದೆವು. ಇದೀಗ ಟಾಸ್ ಸೋತಿದ್ದು, ಬ್ಯಾಟಿಂಗ್ ಸಿಕ್ಕಿದೆ. ಎರಡೂ ಪಂದ್ಯಗಳಲ್ಲಿ ನಾವು ಒಟ್ಟು 19 ವಿಕೆಟ್‌ಗಳನ್ನು ಪಡೆದಿದ್ದೇವೆ. ನಮ್ಮ ಸ್ಪಿನ್ನರ್‌ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ ಮತ್ತು ಸೀಮರ್‌ಗಳು ವಿಕೆಟ್‌ಗಳನ್ನು ಪಡೆದಿದ್ದಾರೆ ಎಂದರು.
ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇದೀಗ ತಮ್ಮ ವೃತ್ತಿ ಜೀವನದ 300ನೇ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ. ಕಿವೀಸ್ ವಿರುದ್ಧದ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಬ್ಯಾಟಿಂಗ್ ಮಾಂತ್ರಿಕ ತಮ್ಮ 300ನೇ ಏಕದಿನ ಪಂದ್ಯವನ್ನು ಆಡಲಿದ್ದಾರೆ. ಈ ಮೂಲಕ ಈ ಮೈಲಿಗಲ್ಲನ್ನು ತಲುಪಿದ 7ನೇ ಭಾರತೀಯ ತಾರೆಯಾಗಲಿದ್ದಾರೆ.
ಉಭಯ ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.
ನ್ಯೂಜಿಲೆಂಡ್: ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡೆರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕೆ
Advertisement