
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ 2025ರ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿರುವ 265 ರನ್ ಗಳ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡ 3 ವಿಕೆಟ್ ನಷ್ಟಕ್ಕೆ 150ರನ್ ಕಲೆ ಹಾಕಿದ್ದು, ಭಾರತದ ಪರ ಅರ್ಧಶತಕ ಸಿಡಿಸಿರುವ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ.
ಚೇಸಿಂಗ್ ಮಾಸ್ಟರ್ ಅಪರೂಪದ ದಾಖಲೆ
ಇನ್ನು ಈ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ಅಪರೂಪದ ದಾಖಲೆ ಬರೆದಿದ್ದು, ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ತಮ್ಮ ರನ್ ಗಳಿಕೆಯನ್ನು 14 ಸಾವಿರ ಗಡಿ ದಾಟಿದ್ದು, ಈ ಪೈಕಿ ಚೇಸಿಂಗ್ ನಲ್ಲಿಯೇ ಬರೊಬ್ಬರಿ 8 ಸಾವಿರ ರನ್ ಗಳಿಸಿದ ದಾಖಲೆ ಬರೆದಿದ್ದಾರೆ. ಆ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಚೇಸಿಂಗ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಜಗತ್ತಿನ 2ನೇ ಆಟಗಾರ ಎಂಬ ಕೀರ್ತಿಗೂ ಕೊಹ್ಲಿ ಭಾಜನರಾಗಿದ್ದಾರೆ.
ಈ ಪಟ್ಟಿಯಲ್ಲಿ ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, ಸಚಿನ್ 42.33 ಸರಾಸರಿಯಲ್ಲಿ ಒಟ್ಟು 8720 ರನ್ ಕಲೆಹಾಕಿದ್ದರು. ಕೊಹ್ಲಿ 2ನೇ ಸ್ಥಾನದಲ್ಲಿದ್ದು, ಭಾರತ ತಂಡದ ನಾಯಕ ರೋಹಿತ್ ಶರ್ಮಾ 6115 ರನ್ ಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಜಯಸೂರ್ಯ (5742 ರನ್) 4 ಮತ್ತು ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ (5575 ರನ್) 5 ನೇ ಸ್ಥಾನದಲ್ಲಿದ್ದಾರೆ.
Most runs in ODI chases
8720 - Sachin Tendulkar (Avg: 42.33)
8003* - Virat Kohli (Avg: 64.54)
6115 - Rohit Sharma (Avg: 49.71)
5742 - Sanath Jayasuriya (Avg: 29.44)
5575 - Jacques Kallis (44.95)
ಚೇಸಿಂಗ್ ವೇಳೆ ಗರಿಷ್ಠ ಸರಾಸರಿ
ಇದೇ ವೇಳೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಗರಿಷ್ಠ ಸರಾಸರಿ ಹೊಂದಿದ ಏಕೈಕ ಆಟಗಾರ ಎಂಬ ಕೀರ್ತಿಗೂ ಕೊಹ್ಲಿ ಭಾಜನರಾಗಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಈ ವರೆಗೂ 237 ಆಟಗಾರರು ಚೇಸಿಂಗ್ ನಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದು, ಈ ಪೈಕಿ ಶೇ.60ಕ್ಕೂ ಅಧಿಕ ಸರಾಸರಿ ಹೊಂದಿರುವ ಏಕೈಕ ಆಟಗಾರ ವಿರಾಟ್ ಕೊಹ್ಲಿ ಆಗಿದ್ದಾರೆ.
Of the 237 players who have aggregated at least 1000 runs in ODI run-chases, Kohli is the only one with a 60-plus average
Advertisement